
ನಾಪೋಕ್ಲು ಮೇ 8 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರುಗಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಮೌನ ಸಂತಾಪ ಸೂಚಿಸಲಾಯಿತು. ನಂತರ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿದ್ದು, ಮುಂಬರುವ ದಿನಗಳಲ್ಲಿ ಒಕ್ಕೂಟದ ಸದಸ್ಯರು ಹಾಗೂ ಅವರ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿ, ಕೊಡಪಾಲು ತೀರ್ಥ ಗಣಪತಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.









