
ಮಡಿಕೇರಿ ಮೇ 8 NEWS DESK : ಪ್ರಸಕ್ತ (2025-26ನೇ) ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಚನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ, ಕರ್ನಾಟಕ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ-ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-60 ಡಿಬಿ ಮತ್ತು ಮೇಲ್ಪಟ್ಟು, ಅಂಧತ್ವ- 6/60 ಅಥವಾ 20/200 ಸ್ನೆಲೆನ್-ಕ್ರ.ಸಂ. 6 ರ ಕೋರ್ಸಿಗೆ ಈ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು: ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ರಾಷ್ಟ್ರ ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗವಕಾಶ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿ ನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯ ಕಲ್ಪಿಸಲಾಗಿದೆ. ಪ್ರವೇಶಕ್ಕೆ ಅರ್ಜಿಯನ್ನು ಜೆಎಸ್‍ಎಸ್ ಮಹಾವಿದ್ಯಾಪೀಠ, ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಮುಚ್ಛಯ, ಮೈಸೂರು-570006 ಈ ವಿಳಾಸದಿಂದ (ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ರೂ.100 ಹಾಗೂ ಎಸ್‍ಸಿ, ಎಸ್‍ಟಿ/ಸಿ-1 ವರ್ಗಗವರಿಗೆ ರೂ.50) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್; www.jsspda.org /ಇ-ಮೇಲ್/ ಮೊಬೈಲ್: 9844644937 ಮೂಲಕ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್, 16 ರೊಳಗೆ ಕಚೇರಿಗೆ ತಲುಪಿಸಬೇಕು ಎಂದು ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.









