
ಮಡಿಕೇರಿ ಮೇ 8 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಶರಣೆ ಹೇಮಾರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವು ಮೇ, 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಸುಂಟಿಕೊಪ್ಪ ಕಾನ್‍ಬೈಲ್ ಸರ್ಕಾರಿ ಪ್ರೌಡ ಶಾಲೆ ಶಿಕ್ಷಕರಾದ ಎನ್.ಕೆ.ಮಾಲಾದೇವಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಇತರರು ಪಾಲ್ಗೊಳ್ಳಲಿದ್ದಾರೆ.









