Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿರಂಗಾಲ : ಬಸವಣ್ಣ ನುಡಿದಂತೆ ಸಮ ಸಮಾಜ ನಿರ್ಮಾಣ ಅವಶ್ಯಕ : ಡಾ.ಜಮೀರ್ ಅಹ್ಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿರಂಗಾಲ : ಬಸವಣ್ಣ ನುಡಿದಂತೆ ಸಮ ಸಮಾಜ ನಿರ್ಮಾಣ ಅವಶ್ಯಕ : ಡಾ.ಜಮೀರ್ ಅಹ್ಮದ್*

ಮೇ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಮೇ 8 NEWS DESK  : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಭಕ್ತಿ ಭಂಡಾರಿ, ಕಾಯಕಯೋಗಿ ಬಸವಣ್ಣನವರು ನುಡಿದಂತೆ ಹಾಗೂ ಪ್ರತಿಪಾದನೆ ಮಾಡಿದ ಸಮ ಸಮಾಜ ನಿರ್ಮಾಣ ಕಾರ್ಯವು ಪ್ರಸ್ತುತ ಸಂದರ್ಭದಲ್ಲಿ ಬಹಳ ಅವಶ್ಯಕತೆ ಇದೆ ಎಂದು ಕೊಡಗು ವಿಶ್ವವಿದ್ಯಾಲಯಯ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹ್ಮದ್ ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯ ವತಿಯಿಂದ  ಗ್ರಾಮದ ಸಂತೆಮಾಳದ ಮಾರುಕಟ್ಟೆ ಪ್ರಾಂಗಣದಲ್ಲಿ ಏರ್ಪಡಿಸಿದ್ದ ಗ್ರಾಮಾಂತರ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶರಣರ ವಚನ ಚಳವಳಿ ಕುರಿತು ಉಪನ್ಯಾಸ ನೀಡುತ್ತಾ, ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಮೌಢ್ಯ ನಿವಾರಣೆಗೆ ಬಸವಣ್ಣನವರು ಸಾಮಾಜಿಕ ಕ್ರಾಂತಿ ನಡೆಸಿದರು ಎಂದರು. 12ನೇ ಶತಮಾನದ ಎಂದಾಗ ಪ್ರತಿಯೊಬ್ಬರೂ ನೆನಪಿಸಿಕೊಳ್ಳುವುದು ಅಂದಿನ ವಚನ ಸಾಹಿತ್ಯ ಚಳವಳಿ. ಅಂದು ಅನುಭವ ಮಂಟಪದಲ್ಲಿ ಎಲ್ಲ ವರ್ಗದವರಿಗೂ ಅದರಲ್ಲೂ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವ ಮೂಲಕ ಸ್ತ್ರೀ ಸಮಾನತೆ ನಾಂದಿ ಹಾಡಿದರು. ಸಮಾಜದಲ್ಲಿ ಭಾತೃತ್ವ, ಸಮಾನತೆ, ಶಾಂತಿ, ನೆಮ್ಮದಿಯ ಸಂದೇಶವನ್ನು ಬಸವಣ್ಣನವರು 12 ನೇ ಶತಮಾನದಲ್ಲಿ ಸಾರಿದರು ಎಂದು ಡಾ ಜಮೀರ್ ಬಣ್ಣಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಜಗತ್ತಿನ ನಾನಾ ಸಮಸ್ಯೆಗಳ ನಿವಾರಣೆಗೆ ಶರಣರ ವಚನದಲ್ಲಿ ಪರಿಹಾರವಿದ್ದು, ಪ್ರತಿಯೊಬ್ಬರೂ ಶರಣರ ಸಮ ಸಮಾಜದ ಕನಸನ್ನು ನನಸು ಮಾಡುವತ್ತ ಮುಂದಾಗಬೇಕು ಎಂದು ಸಲಹೆ ನೀಡಿದರು.
ಸಮಾಜದಲ್ಲಿ ಅಸ್ಪ್ಶ್ಯಶ್ಯತೆ , ಮೌಢ್ಯ ತುಂಬಿ ತುಳುಕುತ್ತಿದೆ. ಇವುಗಳನ್ನೆಲ್ಲ ಹೋಗಲಾಡಿಸಲು ನಾವು ಜ್ಞಾನದ ಕಡೆಗೆ ಹೋಗುವುದು ಅತ್ಯಂತ ಅವಶ್ಯಕ ಎಂದರು. ಶಿರಂಗಾಲ ಗ್ರಾಮದಲ್ಲಿ ಯುವಕ ಎಸ್.ಜೆ.ಉಮೇಶ್ ಮತ್ತು ತಂಡದವರು ಇಂತಹ ಜನಜಾಗೃತಿ ಕಾರ್ಯಕ್ರಮದ ಮೂಲಕ ಗ್ರಾಮಸ್ಥರಲ್ಲಿ ಸಾಮರಸ್ಯ ಬೆಳೆಸಲು ಕೈಗೊಂಡಿರುವ ಕಾರ್ಯ ಶ್ಲಾಘನೀಯವಾದುದು ಎಂದು ಸದಾಶಿವ ಸ್ವಾಮೀಜಿ ಹೇಳಿದರು. ತೊರೆನೂರು ವಿರಕ್ತ ಮಠಾಧಿಪತಿ ಮಲ್ಲೇಶ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರೂ ಬಸವಣ್ಣನವರ ತತ್ವ,ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಶನಿವಾರಸಂತೆ ಪಿಯೂ ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಪಿ.ರಾಜು ಮಾತನಾಡಿ, ಇಂತಹ ಕಾರ್ಯಕ್ರಮಗಳು ಗ್ರಾಮದಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ ಹಾಗೂ ಸೌಹಾರ್ದತೆ ಬೆಳೆಸಲು ಸಹಕಾರಿಯಾಗಿವೆ ಎಂದರು. ಜಿಲ್ಲಾ ವೀರಶೈವ – ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಚ್.ವಿ
ಶಿವಪ್ಪ, ಗ್ರಾಮ ಬಸವ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ ಮಾತನಾಡಿದರು. ಮಹಾಸಭಾದ ಜಿಲ್ಲಾ ಕೋಶಾಧಿಕಾರಿ ಎಚ್.ಪಿ. ಉದಯ್ ಕುಮಾರ್,
ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್, ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್,
ಕಾರ್ಯದರ್ಶಿ ಎಂ.ಎಸ್.ಗಣೇಶ್, ಬಸವ ಸೇವಾ ಸಮಿತಿಯ ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಂ.ಎಸ್.ವಿಜಯಕುಮಾರ್, ಸ್ಥಳೀಯರಾದ ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ ಮತ್ತಿತರರು ಇದ್ದರು. ಶಿಕ್ಷಕ ಎಸ್.ಪಿ.ಪರಮೇಶ್ ಕಾರ್ಯಕ್ರಮ ನಿರ್ವಹಿಸಿದರು.
ಸನ್ಮಾನ: : ಇದೇ ವೇಳೆ ಬಸವ ಸೇವಾ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಕ್ರೀಡಾಪಟು ತೊರೆನೂರು ಗ್ರಾಮದ ಟಿ.ಎಚ್.ಗಣೇಶ್, ಶಿರಂಗಾಲ ಗ್ರಾಮದ ಅರ್ಚಕ ದೇವರಮನೆ ಚಂದ್ರಣ್ಣ , ಉಪನ್ಯಾಸಕ ಜಮೀರ್ ಅಹ್ಮದ್ ಹಾಗೂ ಸಮಿತಿಯ ಅಧ್ಯಕ್ಷ ಎಸ್.ಜೆ.ಉಮೇಶ್ ಅವರನ್ನು ಸನ್ಮಾನಿಸಲಾಯಿತು. ನೆರೆದಿದ್ದ ಎಲ್ಲಾ ಭಕ್ತಾದಿಗಳಿಗೆ ದಾಸೋಹ ಏರ್ಪಡಿಸಲಾಗಿತ್ತು. ಇದಕ್ಕೂ ಮೊದಲು ಗ್ರಾಮದಲ್ಲಿ ಅಲಂಕೃತ ಬೆಳ್ಳಿ ರಥದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 28: ಮಡಿಕೇರಿಯಲ್ಲಿ ಜನೋತ್ಸವ ದಸರಾ ಪ್ರಯುಕ್ತ ಅಕ್ಟೋಬರ್ 13 ಮತ್ತು 14ರಂದು ಆಯೋಜಿಸಲಾಗಿರುವ ಕಾಫಿ…

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.