
ಮಡಿಕೇರಿ ಮೇ 10 NEWS DESK : ವಿರಾಜಪೇಟೆ ನಗರ ವ್ಯಾಪ್ತಿಯ, ವಿಜಯನಗರ 3ನೇ ಹಂತದಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಪುರಸಭೆ ಅಧ್ಯಕ್ಷ ದೇಚಮ್ಮ ಕಾಳಪ್ಪ ಹಾಗೂ ಪುರಸಭಾ ಸದಸ್ಯರು, ಕಾಂಗ್ರೆಸ್ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.









