
ಮಡಿಕೇರಿ ಮೇ 10 NEWS DESK : ಸಿದ್ದಾಪುರ ಮಟ್ಟ ಗ್ರಾಮದ ಗ್ರೀನ್ ಸ್ಟಾರ್ ಯೂತ್ ಕ್ಲಬ್ ವತಿಯಿಂದ ಆಯೋಜನೆಗೊಂಡಿರುವ ವಾಲಿಬಾಲ್ ಪಂದ್ಯಾವಳಿಯಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕೊಡಗಿನಾದ್ಯಂತ ಯುವಕರು ಕ್ರೀಡೆಗೆ ಹೆಚ್ಚು ಆಕರ್ಷಿತರಾಗಿದ್ದು, ಕ್ರೀಡೆಯಲ್ಲಿ ಅದ್ಭುತ ಸಾಧನೆಗಳನ್ನು ಕೂಡ ಮಾಡುತ್ತಿದ್ದಾರೆ. ಇಂತಹ ಪಂದ್ಯಾವಳಿಗಳು ಯುವ ಜನತೆಗೆ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಪಂದ್ಯಾವಳಿಯ ಆಯೋಜಕರನ್ನು ಅಭಿನಂದಿಸುತ್ತ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಸಕರು ಶುಭ ಕೋರಿದರು. ಈ ಸಂದರ್ಭ ವಲಯ ಅಧ್ಯಕ್ಷರು, ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.









