
ಮಡಿಕೇರಿ ಮೇ 12 NEWS DESK : ಬಿಟ್ಟಂಗಾಲದ ಪೆಗ್ಗಿರಿಕಾಡು ಎಂಬಲ್ಲಿ ಸಾಕಿದ ಹಸು ದಾಳಿಯಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದ ದಯಾನಂದ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕರೊಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಪ್ರಮುಖರು ಉಪಸ್ಥಿತರಿದ್ದರು.










