Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಜೆಪಿ ಮಂದಿಯ ಗೂಂಡಾ ವರ್ತನೆಗೆ ಕಡಿವಾಣ : ಕೊಡಗು ಕಾಂಗ್ರೆಸ್ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ಬಿಜೆಪಿ ಮಂದಿಯ ಗೂಂಡಾ ವರ್ತನೆಗೆ ಕಡಿವಾಣ : ಕೊಡಗು ಕಾಂಗ್ರೆಸ್ ಎಚ್ಚರಿಕೆ*

May 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 12 : ಮಡಿಕೇರಿ ನಗರದಲ್ಲಿ ಕೆಲವು ಬಿಜೆಪಿ ಪ್ರತಿನಿಧಿಗಳ ಗೂಂಡಾ ವರ್ತನೆ ಮುಂದುವರೆದಿದ್ದು, ಪಾರ್ಕಿಂಗ್ ವಿಚಾರದಲ್ಲಿ ಶುಲ್ಕ ವಸೂಲಾತಿ ಮಾಡುವವರ ಮೇಲೆ ಹಲ್ಲೆ ನಡೆದಿದೆ. ಅಕ್ರಮ ಮಳಿಗೆಗಳ ನಿರ್ಮಾಣದ ಆರೋಪ ಕೂಡ ಹಲ್ಲೆ ಮಾಡಿದವರ ಮೇಲೆ ಇದ್ದು ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೂಂಡಾ ವರ್ತನೆಯಲ್ಲಿ ತೊಡಗಿರುವವರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿರುವ ಕುರಿತು ದೂರುಗಳಿದೆ. ಬಿಜೆಪಿ ಅಧಿಕಾರ ಕಳೆದುಕೊಂಡು ಎರಡು ವರ್ಷಗಳಾಗಿದೆ. ಆದರೆ ಕಳೆದ ಎರಡು ದಶಕಗಳಿಂದ ಮೈಗೂಡಿಸಿಕೊಂಡಿದ್ದ ರೌಡಿಸಂ, ಭ್ರಷ್ಟಾಚಾರ ಮತ್ತು ಅಕ್ರಮ ವ್ಯವಹಾರ ಕೆಲವರಿಂದ ಮುಂದುವರೆದಿದೆ. ಇದರ ಪರಿಣಾಮವಾಗಿ ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ವಸೂಲಾತಿ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ಮಾಡಿದವರು ಪೊಲೀಸ್ ಅತಿಥಿಗಳಾಗಿದ್ದಾರೆ. ಇವರುಗಳು ನಗರದಲ್ಲಿ ಅಕ್ರಮ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದು, ಇದನ್ನು ಪ್ರಶ್ನಿಸಲು ಹೋದವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಈಗಿನ ಶಾಸಕರು ಕೈಗೆತ್ತಿಕೊಂಡ ಅಭಿವೃದ್ಧಿ ಕಾರ್ಯಗಳಿಗೆ ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸುಸಂಸ್ಕೃತರ ಪಕ್ಷ ಎಂದು ಹೇಳಿಕೊಳ್ಳುತ್ತಿದೆ, ಆದರೆ ವಿರಾಜಪೇಟೆಯ ಬಿಜೆಪಿ ಪ್ರಮುಖರೊಬ್ಬರ ಆಕ್ಷೇಪಾರ್ಹ ಧ್ವನಿಮುದ್ರಣ ಎಲ್ಲೆಡೆ ವೈರಲ್ ಆಗಿದ್ದು, ಅವರ ನೈತಿಕತೆಯನ್ನು ಪ್ರಶ್ನೆ ಮಾಡುವಂತ್ತಾಗಿದೆ. ಈ ಹಿಂದೆ ಬಿಜೆಪಿಯ ಪ್ರಮುಖರೊಬ್ಬರ ರೆಸಾರ್ಟ್ನಲ್ಲಿ ಗಲಾಟೆ ನಡೆದಿತ್ತು. ಮಾಜಿ ಶಾಸಕರುಗಳು ತಮ್ಮ ಪಕ್ಷದೊಳಗಿರುವವರ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಧರ್ಮಜ ಉತ್ತಪ್ಪ ಒತ್ತಾಯಿಸಿದರು.
ಅಕ್ರಮದಲ್ಲಿ ತೊಡಗಿರುವವರಿಗೆ ಮಾಜಿ ಸಂಸದರು ಹಾಗೂ ಮಾಜಿ ಶಾಸಕರುಗಳ ಬೆಂಬಲವಿದೆಯೇ ಎಂದು ಪ್ರಶ್ನಿಸಿದ ಅವರು, ಅಕ್ರಮ ವ್ಯವಹಾರದ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.  *ರಸ್ತೆ ಅಭಿವೃದ್ಧಿ* ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ವಿವಿಧ ಮೂಲಗಳಿಂದ 90 ಕೋಟಿ ರೂ. ಅನುದಾನ ಬಂದಿದೆ. ಭಾಗಮಂಡಲ ರಸ್ತೆಯ ಒಂದು ಹಂತದ ಕಾಮಗಾರಿಗೆ 4 ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು, ಈಗಾಗಲೇ ಭೂಮಿಪೂಜೆ ನೆರವೇರಿಸಲಾಗಿದೆ. ಮಡಿಕೇರಿಯಿಂದ ಭಾಗಮಂಡಲದವರೆಗಿನ ಸಂಪೂರ್ಣ ರಸ್ತೆ ಮುಂದಿನ ಜನವರಿಯೊಳಗೆ ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದರು. *ಪಾರ್ಕಿಂಗ್ ಕಾಂಪ್ಲೆಕ್ಸ್* ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ವಾಹನಗಳ ಸಂಖ್ಯೆ ಮಿತಿ ಮೀರುತ್ತಿದ್ದು, ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಆದರೆ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಾದ ಇಲಾಖೆಗಳು ನಿದ್ದೆಯಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕರು ಹಾಗೂ ಸರ್ಕಾರದ ಗಮನ ಸೆಳೆದು ನಗರದಲ್ಲಿ ಸುಸಜ್ಜಿತ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ನಗರದ ಜನತೆ ಅತೀ ನಿರೀಕ್ಷೆಯಿಂದ ನಗರಸಭೆಯಲ್ಲಿ 16 ಸ್ಥಾನಗಳನ್ನು ಬಿಜೆಪಿಗೆ ಒದಗಿಸಿಕೊಟ್ಟರು. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಕಳೆದ ಎರಡೂವರೆ ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ಟೀಕಿಸಿದರು. ಮಡಿಕೇರಿ ಕ್ಷೇತ್ರದ ಶಾಸಕರು ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹ್ಮದ್ ಹಾಗೂ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಶ್ರೀ ಮುತ್ತಪ್ಪ ದೇವಾಲಯದಲ್ಲಿ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ*
Next Article *ಕರ್ನಾಟಕ ಶಕ್ತಿ’ ಪ್ರಶಸ್ತಿಗೆ ಭಾಜನರಾದ ಬಿ.ಜಿ.ಅನಂತಶಯನ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.