Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ಜ್ಞಾನ ಪರಂಪರೆ ಶೈಕ್ಷಣಿಕ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ಜ್ಞಾನ ಪರಂಪರೆ ಶೈಕ್ಷಣಿಕ ಕಾರ್ಯಾಗಾರ*

ಮೇ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಮೇ 12 NEWS DESK : ಭಾರತೀಯ ಜ್ಞಾನ ಪರಂಪರೆಯು ಅತ್ಯಂತ ಹೆಚ್ಚು ಅವಜ್ಞೆಗೊಳಗಾಗಿದೆ ಮತ್ತು ನಮ್ಮವರಿಂದಲೇ ನಿರಾಕರಿಸಲ್ಪಟ್ಟಿದೆ. ಅಧರ್ಮವನ್ನು ಧರ್ಮ ಎಂದು ಬಿಂಬಿಸುವ ಕೆಲಸಗಳು ನಡೆಯುತ್ತಿವೆ. ಇದರಿಂದಾಗಿ ನಾವು ಕಳೆದುಕೊಂಡದ್ದು ಅಪಾರ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ ಎನ್ನುವ ಎರಡು ದಿನಗಳ ಶೈಕ್ಷಣಿಕ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಅವರು ಮಾತಾಡಿದರು. ಕಳೆದುಕೊಂಡಿರುವುದನ್ನು ಅಲ್ಲಿಯೇ ಹುಡುಕಬೇಕು, ಆಗ ನಮಗೆ ಪ್ರೇರಣೆ ಸಿಗಬಹುದು. ಆ ಬಳಿಕ ಏನು ಮಾಡಬೇಕೆಂಬುದನ್ನು ವಿಮರ್ಶಿಸಬೇಕು ಹಾಗಾಗಿ ಆ ಪ್ರೇರಣೆ ತುಂಬುವ ಕೆ¯ಸವನ್ನು ಇಲ್ಲಿ ಮಾಡಲಾಗುತ್ತಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕಿ ಡಾ.ಸುಧಾ.ಎಸ್.ರಾವ್ ಮಾತನಾಡಿ ನಮ್ಮತನದ ಬಗ್ಗೆ ಹೆಮ್ಮೆ ಮೂಡುವಂತಹ ಶೈಕ್ಷಣಿಕ ಚಟುವಟಿಕೆಗಳು ನಡೆಯಬೇಕು. ಭಾರತೀಯ ಜ್ಞಾನ ಪರಂಪರೆಯ ವಿಷಯವನ್ನು ಬೋಧಿಸುವುದಕ್ಕೆ ಯಾವ ವಯೋಮಾನದ ವಿದ್ಯಾರ್ಥಿಗಳಿಗೆ ಯಾವ ರೀತಿಯ ಚಟುವಟಿಕೆಗಳು ಹೆಚ್ಚು ಸೂಕ್ತ ಎನ್ನುವ ಚರ್ಚೆಯಾಗಬೇಕು. ಅದರ ಬಗ್ಗೆ ಅವಲೋಕನವನ್ನು ಮಾಡಿ ಅದಕ್ಕೆ ತಕ್ಕುದಾದ ಪಠ್ಯ ಕ್ರಮವನ್ನು ತಯಾರಿಸಬೇಕು ಎಂದರು. ಎರಡು ದಿನಗಳ ಕಾಲ ನಡೆದ ಈ ಕಾರ್ಯಾಗಾರದಲ್ಲಿ ಪ್ರಾಚೀನ ಭಾರತದ ವೇದಗ್ರಂಥ, ತತ್ವಶಾಸ್ತ್ರಗಳ ವ್ಯಾಪ್ತಿ ಮತ್ತು ಪ್ರಾಮುಖ್ಯತೆ, ಸಾಂಪ್ರದಾಯಿಕ ಜ್ಞಾನ ಮತ್ತು ಪಾಶ್ಚಿಮಾತ್ಯ ಜ್ಞಾನದ ಅವಲೋಕನ, ಪ್ರಾಚೀನ ಭಾರತದ ಭಾಷಾ ಶಾಸ್ತ್ರ, ಸಂಖ್ಯೆ ಮತ್ತು ಮಾಪನ, ಕಲೆ, ಕರಕುಶಲತೆ ಮತ್ತು ವ್ಯಾಪಾರ, ಪ್ರಾಚೀನ ಭಾರತದ ಗಣಿತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಭೌತಶಾಸ್ತಗಳ ಪರಿಚಯ ಮತ್ತು ಅವಲೋಕನÀ, ಪ್ರಾಚೀನ ಭಾರತದ ಖಗೋಳ ಶಾಸ್ತ್ರ, ಜೋತಿಷ್ಯ ಶಾಸ್ತ್ರ ಹಾಗೂ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಪ್ರಾಚೀನ ಭಾರತದ ನಗರಯೋಜನೆಗಳು ಮತ್ತು ವಾಸ್ತುಶಿಲ್ಪ, ಕೃಷಿ, ಸಾರ್ವಜನಿಕ ಆಡಳಿತ ವ್ಯವಸ್ಥೆ, ಪ್ರಾಚೀನ ಭಾರತದ ಆರೋಗ್ಯ, ಸ್ವಾಸ್ಥ್ಯ ಮತ್ತು ಮನೋವಿಜ್ಞಾನ, ಔಷಧ ಪದ್ದತಿ ಹಾಗೂ ಸುಸ್ಥಿರ ಅಭಿವೃದ್ಧಿಯ ಗುರಿಗಳು ಹೀಗೆ ಆರು ಅವಧಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳು ವಿಷಯ ವಿಸ್ತಾರವನ್ನು ಮಾಡಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ವಿವೇಕಾನಂದ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ.ಶೊಭಿತಾ ಸತೀಶ್ ಮಾತನಾಡಿ ಭಾರತೀಯ ಜ್ಞಾನ ಪರಂಪರೆಯನ್ನು ನಾವು ಒಂದಲ್ಲ ಒಂದು ರೀತಿಯಲ್ಲಿ ಮಕ್ಕಳಿಗೆ ಬೋಧಿಸುತ್ತಾ ಬಂದಿದ್ದೇವೆ. ಬದಲಾದ ಶೈಕ್ಷಣಿಕ ನೀತಿಯಲ್ಲಿ ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರಕಿದ್ದು ಇದರ ಬಗ್ಗೆ ಹೆಚ್ಚು ಯೋಚಿಸುವಂತಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಅಗಾಧವಾದ ವಿಷಯಗಳುಳ್ಳ ಭಾರತೀಯ ಜ್ಞಾನ ಪರಂಪರೆಯನ್ನು ಎರಡು ದಿನಗಳಲ್ಲಿ ಪರಿಚಯಿಸಲು ಸಾಧ್ಯವಿಲ್ಲ ಆದರೂ ಅದನ್ನು ಪೂರ್ಣವಾಗಿ ತಿಳಿದುಕೊಳ್ಳಬೇಕೆಂಬ ಮನಸ್ಥಿತಿ ಉಂಟುಮಾಡುವುದೇ ಈ ಕಾರ್ಯಾಗಾರದ ಉದ್ದೇಶ ಎಂದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಮತ್ತು ಕಾರ್ಯಕ್ರಮ ಸಂಯೋಜಕ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ನವೀನ್.ಎಸ್.ಪಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ಸ್ ವಿಭಾಗದ ಹಿರಿಯ ಪ್ರಯೋಗಾಲಯ ಬೋಧಕ ಸತೀಶ್.ಕೆ ವಿವಿಧ ಜವಾಬ್ಧಾರಿಗಳನ್ನು ನಿರ್ವಹಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.