
ಮಡಿಕೇರಿ ಮೇ 13 NEWS DESK : ಪೊನ್ನಂಪೇಟೆ ಭಾಗದ ಕೆ ಬಾಡಗ ಪಂಚಾಯಿತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಶಾಸಕರನ್ನು ಬರಮಾಡಿಕೊಂಡ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ತಮ್ಮ ಹಲವು ಅಭಿವೃದ್ಧಿ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ವಿಶೇಷವಾಗಿ ಕೆ.ಬಾಡಗ ಗ್ರಾಮ ಪಂಚಾಯಿತಿ ಈಗ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಬದಲಾಗಿ, ಸೂಕ್ತ ನಿವೇಶನ ಗುರುತಿಸಿ ಅಥವಾ ಪರ್ಯಾಯ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮ ಪ್ರಮುಖ ಬೇಡಿಕೆಯನ್ನು ವಿವರಿಸಿದರು. ಇದೇ ಸಂದರ್ಭ ಗ್ರಾಮಸ್ಥರು ಕೂಡ ತಮ್ಮ ಮನವಿಯನ್ನು ಸಲ್ಲಿಸಿದರು. ಶಾಸಕರು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕೆ.ಬಾಡಗ ವಲಯ ಅಧ್ಯಕ್ಷ ಚಿಮಣ್ಣಮಾಡ ರವಿ, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









