ಮಂಗಳೂರು ಮೇ 17 NEWS DESK : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಇವರ ಆಶ್ರಯದಲ್ಲಿ ಸುಮಾರು 36 ಕೋಟಿ ರೂ. ವೆಚ್ಚದಲ್ಲಿ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಸ್ಪೀಕರ್ ಯು.ಟಿ. ಖಾದರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಜಿಲ್ಲಾಧಿಕಾರಿ ಮಲೈ ಮುಗಿಲನ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.











