Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಡಿಪಿ ಸಭೆ : ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಡಿಪಿ ಸಭೆ : ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

May 17, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 17 : ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗಧಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಮಾರ್ಚ್ ಅಂತ್ಯದ ವರೆಗಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಶಾಸಕರು ಕೊಯನಾಡು ಬಳಿ ಬರೆಕುಸಿತದಿಂದ ಶಾಲಾ ಕಟ್ಟಡ ಹಾನಿಯಾಗಿತ್ತು. ಈ ಹಿನ್ನೆಲೆ ಸಂಪಾಜೆ ಶಾಲೆಗೆ ವಿದ್ಯಾರ್ಥಿಗಳು ಹೋಗುತ್ತಿದ್ದರು. ಆದ್ದರಿಂದ ಅಲ್ಲಿನ ಸ್ಥಳೀಯರು ಪಕ್ಕದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಅವಕಾಶ ಮಾಡಬೇಕು ಎಂದು ಮನವಿ ಮಾಡಿದ್ದರು. ಅದರಂತೆ ಜಾಗ ಗುರುತಿಸಲಾಗಿದ್ದು, ಕೂಡಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲು ಅಗತ್ಯ ಕ್ರಮವಹಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಜಿಲ್ಲಾಡಳಿತ ವತಿಯಿಂದ ಜಾಗ ಗುರುತಿಸಲಾಗಿದೆ. ಆದರೆ ಅರಣ್ಯ ಇಲಾಖೆಯಿಂದ ಒಪ್ಪಿಗೆಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಂದಾಯ ಇಲಾಖೆಯಿಂದ ಶಾಲಾ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಲಾಗಿದೆ ಎಂದು ತಿಳಿಸಿದರು. ಮುಂದಿನ ವಾರ ಮುಂಗಾರು ಆರಂಭವಾಗುತ್ತಿದ್ದು, ಶಾಲಾ ಕಟ್ಟಡಗಳ ಸುಸ್ಥಿತಿ, ಸುತ್ತುಗೋಡೆ ನಿರ್ಮಾಣ, ಶೌಚಾಲಯ, ಆಟದ ಮೈದಾನ, ಶಾಲೆಗೆ ಬೇಕಿರುವ ಪೀಠೋಪಕರಣಗಳು ಹೀಗೆ ಇತರೆ ಮಾಹಿತಿ ಒದಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಸಂಬಂಧ ರಸ್ತೆ, ಸೇತುವೆ, ಕಟ್ಟಡಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಷ್ಟಪಟ್ಟು ಅನುದಾನ ಬಿಡುಗಡೆ ಮಾಡಿಸುತ್ತೇವೆ. ಆದರೆ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಒದಗಿಸದೆ ಉದಾಸೀನ ತೋರುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಸಿಟ್ಟಾದರು. ‘ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಗಮನ ಸೆಳೆದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಬಗ್ಗೆ ಒತ್ತು ನೀಡಬಹುದಾಗಿದೆ. ಅದನ್ನು ಬಿಟ್ಟು ಇತರೆ ಬಗ್ಗೆ ಮಾಹಿತಿ ನೀಡುವುದು ಸರಿಯಲ್ಲ ಎಂದರು.’ ರಸ್ತೆ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಪ್ರತೀ ನಿತ್ಯ ಮನವಿಗಳು ಸಲ್ಲಿಕೆಯಾಗುತ್ತಿವೆ. ಅಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದಲ್ಲಿ, ಸಾರ್ವಜನಿಕರಿಂದ ಮನವಿಗಳು ಬರುವುದು ಕಡಿಮೆಯಾಗಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸ್ಪಂದಿಸುವಂತಾಗಬೇಕು ಎಂದರು. ಸರ್ಕಾರದ ವಿವಿಧ ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿದೆ. ಅದನ್ನು ಅರಿತುಕೊಂಡು ಜನಸಾಮಾನ್ಯರ ಕೆಲಸಗಳನ್ನು ಮಾಡಬೇಕು. ಸರ್ಕಾರ ಕಾರ್ಯಕ್ರಮ ರೂಪಿಸುವುದು ಜನರಿಗಾಗಿ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ಜನರಿಗಾಗಿ ಎಂಬುದನ್ನು ಮರೆಯಬಾರದು ಎಂದು ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು. ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಕೆಆರ್‌ಐಡಿಎಲ್, ಪಿಎಂಜಿಎಸ್‌ವೈ ಸೇರಿದಂತೆ ವಿವಿಧ ಎಂಜಿನಿಯರಿಂಗ್ ಇಲಾಖೆಗಳು ರಸ್ತೆ, ಸೇತುವೆ ಮತ್ತಿತರ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವಂತೆ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ಸಾಮಾಜಿಕ ಅರಣ್ಯ ವಿಭಾಗದಲ್ಲಿ ಸಾರ್ವಜನಿಕರಿಗೆ ಬೇಡಿಕೆ ಇರುವ ಗಿಡಗಳನ್ನು ವಿತರಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ಕ್ಯಾಂಪ್ ಮಾದರಿಯಲ್ಲಿ ಆಯೋಜನೆ ಮಾಡಿ ಗಿಡಗಳ ವಿತರಣೆಗೆ ಕ್ರಮವಹಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದರು. ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಪ್ರತೀ ಮನೆಗೂ ಕುಡಿಯುವ ನೀರು ಕಲ್ಪಿಸಬೇಕು. ಜಲ ಜೀವನ್ ಮಿಷನ್ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಹಾಗೆಯೇ ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಬAಧಿಸಿದAತೆ ಮಾಹಿತಿ ಪಡೆದರು. ಜಲಜೀವನ್ ಮಿಷನ್ ಯೋಜನೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಆಹ್ವಾನಿಸಲಾಗುವುದು. ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಸಾಲ ಸೌಲಭ್ಯ ಸಹಾಯಧನ, ಗಂಗಾ ಕಲ್ಯಾಣ, ಸಾರಥಿ ಹೀಗೆ ವಿವಿಧ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದರು. ಸಣ್ಣ ನೀರಾವರಿ, ಚೆಕ್ಕು ಡ್ಯಾಂಗಳ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ತೋಟಗಾರಿಕೆ ಇಲಾಖೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ಪಡೆದರು. ವಿದ್ಯುತ್ ಉಪ ಘಟಕಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಕಾಮಗಾರಿ ಸಂಬಂಧಿಸಿದಂತೆ ಮಾಹಿತಿ ಪಡೆದರು. ಭಾಗಮಂಡಲ ಬಳಿಯ ತಣ್ಣಿಮಾನಿ ಗ್ರಾಮದ ಬಳಿ ಆದಿವಾಸಿ ಕುಟುಂಬಗಳು ವಾಸಿಸುತ್ತಿದ್ದು, ಇವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್‌ಗೆ ಸೂಚಿಸಿದರು. ಸಮಾಜ ಕಲ್ಯಾಣ, ಸಹಕಾರ, ಆಹಾರ, ಕೆಎಸ್‌ಆರ್‌ಟಿಸಿ, ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಮಿಕ ಇಲಾಖೆ, ಕೃಷಿ ಮತ್ತಿತರ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಾಹಿತಿ ಪಡೆದರು. ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಳೇಮಾಡ ಪ್ರಶಾಂತ್, ಜಾನ್ಸನ್, ಮಂದ್ರೀರ ಮೋಹನ್, ಕೆಡಿಪಿ ಸದಸ್ಯರಾದ ಟಿ.ಕೆ.ಅಬ್ದುಲ್, ರೇಖಾ, ಪೊನ್ನಕ್ಕಿ, ಶಶಿಧರನ್, ವಿ.ಟಿ.ವಾಸು, ಅಜಿತ್ ಅಯ್ಯಪ್ಪ, ರಫಿಕ್, ಪ್ರಶಾಂತ್ ಉತ್ತಪ್ಪ, ಭರತ್ ಪಿ.ಎಸ್., ಎಚ್.ಪಿ.ಗಣೇಶ್, ಮರ್ವಿನ್ ಲೋಬೋ, ಎಂ.ವಿ.ಕಿರಣ್, ರೈನಾ ಕಾರ್ಯಪ್ಪ, ತಿಲಕ ಸುಬ್ರಾಯ, ಕುಶಾಲಪ್ಪ, ಇತರರು ವೈದ್ಯರ ನೇಮಕಾತಿ, ಕುಡಿಯುವ ನೀರು ಕಾಮಗಾರಿ ನಿರ್ವಹಣೆ, ರಸ್ತೆಗಳ ಅಭಿವೃದ್ಧಿ ಮತ್ತಿತರ ಸಂಬAಧ ಗಮನ ಸೆಳೆದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಕುಡಿಯುವ ನೀರು ಯೋಜನೆ ಜಲಜೀವನ್ ಮಿಷನ್, ಪಂಚಾಯತ್ ರಾಜ್ ಇಲಾಖೆಯಡಿ ರಸ್ತೆಗಳ ಅಭಿವೃದ್ಧಿ ಮತ್ತಿತರ ಸಂಬAಧ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ, ತಾ.ಪಂ.ಇಒ ಅಪ್ಪಣ್ಣ, ಶೇಖರ್, ತಹಶೀಲ್ದಾರರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ವಿಕಲಚೇತನ ಮಹಿಳೆಯ ಮೇಲೆ ಹಲ್ಲೆ ಆರೋಪ : ಕಾನೂನು ಕ್ರಮಕ್ಕೆ ಆಗ್ರಹ*
Next Article *ಅರೆಭಾಷಿಕರ ‘ಐನ್‌ಮನೆ’ ಸಂಸ್ಕೃತಿ, ಸಂಪ್ರದಾಯ ದಾಖಲೀಕರಿಸಿ : ಶಾಸಕ ಡಾ.ಮಂತರ್ ಗೌಡ*

Website design development company services in Mangalore

Forex Trading Teacher in India

Related Posts

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ…

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.