Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಮುತ್ತು ಬಂದಿದೆ ಕೇರಿಗೆ” : ಭಕ್ತಿ ಬೀದಿಯ ಸರಕಾಗಬಾರದು : ಕಾ.ತ.ಚಿಕ್ಕಣ್ಣ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಮುತ್ತು ಬಂದಿದೆ ಕೇರಿಗೆ” : ಭಕ್ತಿ ಬೀದಿಯ ಸರಕಾಗಬಾರದು : ಕಾ.ತ.ಚಿಕ್ಕಣ್ಣ ಅಭಿಮತ*

ಮೇ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 18 : ವಾಸ್ತವವಾಗಿ ಭಕ್ತಿ ಆತ್ಮನಿವೇದನೆಗೆ ಮತ್ತು ಸಾಮಾಜಿಕ ಬದುಕಿನಲ್ಲಿ ಸಂಸ್ಕಾರವನ್ನು ಮೂಡಿಸುವುದಕ್ಕೆ ಅಗತ್ಯವಾಗಿದೆ. ಆದರೆ ಇಂದು ಭಕ್ತಿಯನ್ನು ಬೀದಿಯ ಸರಕನ್ನಾಗಿ ನಾವು ನೋಡುತ್ತಿದ್ದೇವೆ ಎಂದು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಬೆಂಗಳೂರಿನ ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ “ಮುತ್ತು ಬಂದಿದೆ ಕೇರಿಗೆ” ಎಂಬ ರಸ ಗ್ರಹಣ ಶಿಬಿರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾ.ತ.ಚಿಕ್ಕಣ್ಣ ಅವರು ಕನಕದಾಸರು ಕೇವಲ ಭಕ್ತ ಮಾತ್ರ ಅಲ್ಲ, ಅವರು ಒಬ್ಬ ವಿಚಾರವಾದಿ ಹಾಗೂ ಕವಿಯೂ ಅಗಿದ್ದರು. ಹರಿದಾಸ ಪರಂಪರೆಯಲ್ಲಿ 150 ಹರಿದಾಸರು ಬಂದು ಹೋಗಿದ್ದಾರೆ. ಭಕ್ತಿಯನ್ನು ಸಾಮಾಜಿಕ ಸುಧಾರಣೆಗೆ ಮತ್ತು ಜ್ಞಾನೋಪಾಸನೆಗೆ ಬಳಸಿಕೊಂಡ ಕೀರ್ತನಾಕಾರರಲ್ಲಿ ಮೊದಲು ನಿಲ್ಲುವವರು ಕನಕದಾಸರು ಹಾಗೂ ಪುರಂದರದಾಸರು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ರಾಘವ ಬಿ. ಅವರು ದಾಸರಲ್ಲಿ ಶ್ರೇಷ್ಠರು ಕನಕದಾಸರು, ಇವರು ಒಬ್ಬ ತತ್ವಜ್ಞಾನಿ, ಕವಿ ಹಾಗೂ ಸಂಗೀತಗಾರರೂ ಆಗಿದ್ದರು. ಮಾನವತಾವಾದಿಯಾದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದರು. ವಿಶೇಷ ಉಪನ್ಯಾಸಕರಾದ ಡಾ.ಪುರುಷೋತ್ತಮ ಡಿ. ಅವರು ಮಾತನಾಡಿ ಕನಕದಾಸರ ಚಿಂತನೆಗಳ ಜೊತೆಗೆ ನಮ್ಮ ಇಡೀ ಭಾರತದ ಚರಿತ್ರೆಯನ್ನು ಗಮನಿಸಿದಾಗ ಇಬ್ಬರು ನಮಗೆ ಬಹಳ ಮುಖ್ಯವಾಗುತ್ತಾರೆ. ಅಶೋಕ ಯುದ್ಧವನ್ನು ನಿರಾಕರಿಸಿದ ಮಹಾನ್ ಚಕ್ರವರ್ತಿ. ಕಳಿಂಗ ಯುದ್ಧದ ರಕ್ತಪಾತ ನೋಡಿ ಯುದ್ಧ ಬೇಡವೆಂದು ನಿರ್ಧರಿಸಿ ಬೌದ್ಧ ಧರ್ಮದ ಚಿಂತನೆಗಳನ್ನು ಅಳವಡಿಸಿಕೊಂಡು ವಿಶ್ವಕ್ಕೆ ಶಾಂತಿ ಸಂದೇಶ ನೀಡಿದವರು ಅವರು. ರಾಜಮನೆತನದ ವರ್ಚಸ್ಸು, ಅಧಿಕಾರ ಇದ್ದರೂ ದಾಸರಾದ ಕನಕದಾಸರು ಶಾಂತಿಯ ಅನುಭವ ಆಗಬೇಕಾದರೆ ಯುದ್ಧದ ದುಷ್ಪರಿಣಾಮಗಳ ಅರಿವಿರಬೇಕು. ಎಲ್ಲಾ ವೃತ್ತಿಗಳ ಮೂಲ ಉದ್ದೇಶ ಮನುಷ್ಯನ ಮುಲಭೂತ ಆವಶ್ಯಕತೆಗಳಲ್ಲದೆ ಬೇರೇನಿಲ್ಲ. “ಎಲ್ಲಾರು ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ” ಎಂಬ ದಾಸರ ಕೀರ್ತನೆಯ ಸಾರ ಇದು ಎಂದು ತಿಳಿಸಿದರು. ಮಾಹಿತಿ ಇದ್ದರೆ ಸಾಲದು ಜ್ಞಾನ ಇರಬೇಕು, ನಮ್ಮೊಳಗಿನ ನಾನು ಎಂಬುವುದನ್ನು ಕಳೆದುಕೊಳ್ಳುವುದು ಬಹಳ ಮುಖ್ಯ. ನಾನೇ ಎಂಬ ಅಹಂ ಇರಬಾರದು, ನಮ್ಮಲ್ಲಿ ಬಾಗುವ ಗುಣ ಮತ್ತು ಸ್ವೀಕರಿಸುವ ಗುಣ ಇರಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಪೂಣಚ್ಚ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ನಿರೂಪಿಸಿ, ಡಾ.ಮಹಾಲಕ್ಷ್ಮಿ ಟಿ.ಎಸ್ ವಂದಿಸಿದರು. ವಿದ್ಯಾರ್ಥಿನಿ ಸಪ್ನ ಎಂ.ಶೇಟ್ ಕೀರ್ತನೆ ಹಾಡಿದರು. ಕನ್ನಡ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.