Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ : ಎಸ್.ಎಂ.ಸಿದ್ದರಾಜಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ : ಎಸ್.ಎಂ.ಸಿದ್ದರಾಜಪ್ಪ ಅಭಿಮತ*

ಮೇ 19, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 19 NEWS DESK :  ಬಸವಣ್ಣನವರ ವಚನಗಳು ಹಾಗೂ ಶಿವಶರಣೆಯರ ವಚನಗಳು ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿವೆ.ವಿಶ್ವ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ಮಹತ್ವದ ಕೊಡುಗೆ ನೀಡಿದೆ‌ ಎಂದು
ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ಪ್ರೌಢಶಾಲಾ ವಿಭಾಗದ ‌ಉಪ ಪ್ರಾಂಶುಪಾಲ ಎಸ್.ಎಂ ಸಿದ್ದರಾಜಪ್ಪ ಹೇಳಿದರು.
ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಕುಶಾಲನಗರ‌ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮದಲ್ಲಿ 12 ನೇ ಶತಮಾನದ ‌ವಚನ ಸಾಹಿತ್ಯ ಹಾಗೂ ಶಿವ ಶರಣ- ಶರಣೆಯರ ಕೊಡುಗೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಭಕ್ತಿ ಭಂಡಾರಿ, ಮಹಾನ್ ಮಾನವತಾವಾದಿ ಹಾಗೂ ಸಾಮಾಜಿಕ ಕ್ರಾಂತಿ ಪುರುಷ
ಜಗಜ್ಯೋತಿ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವನ್ನು ಸಾರುತ್ತವೆ. ಬಸವಣ್ಣನವರ ಸಾರಥ್ಯದಲ್ಲಿ 12 ನೇ ಶತಮಾನದಲ್ಲಿ‌ ನಡೆದ ವಚನ ಚಳವಳಿಯು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು ಎಂದರು. ‘ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಬಸವೇಶ್ವರರು’ ಎಂದು ಸಿದ್ದರಾಜಪ್ಪ ಬಣ್ಣಿಸಿದರು. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರು ವಚನಗಳ ಮೂಲಕ ಹಾಕಿಕೊಟ್ಟ ಭಕ್ತಿ ಮಾರ್ಗ, ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯ ರಹಿತ ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದರು. 12 ನೇ ಶತಮಾನದಲ್ಲಿ ಬಸವಣ್ಣನವರು ಮಾನವೀಯತೆಗೆ ಮಾರ್ಗದರ್ಶಕ ಬೆಳಕಾಗಿದ್ದರು ಎಂದು ಬಣ್ಣಿಸಿದರು ಮತ್ತು ಅವರ ತತ್ವಶಾಸ್ತ್ರದ ನಿರಂತರ ಪ್ರಸ್ತುತತೆಯನ್ನು ಒತ್ತಿ ಹೇಳಿದರು.
ಮಹಾಪುರುಷರು ಬೌದ್ಧಿಕವಾಗಿ ಬದುಕಿದ್ದಾರೆ. ಆ ಸಾಲಿನಲ್ಲಿ ಬಸವಣ್ಣನವರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದರು. ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಮಾತನಾಡಿ, ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲಾ ವರ್ಗಗಳ ವಚನಕಾರರ ಕಾಯಕ ಸಮಾಜವನ್ನು ನಿರ್ಮಾಣ ಮಾಡಿದ್ದಾರೆ. ಪ್ರತಿಯೊಬ್ಬರೂ ಬಸವಣ್ಣನವರ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ತೊರೆನೂರು ವಿರಕ್ತಮಠದ ಮಲ್ಲೇಶ ಸ್ವಾಮೀಜಿ ಮಾತನಾಡಿ,
ಬಸವಣ್ಣನವರಂತಹ ಪರಮಜ್ಞಾನಿಗಳ ವಚನಗಳನ್ನು ಕೇಳಿ ಪಾಲಿಸಿದರೆ ಪ್ರತಿಯೊಬ್ಬರ ಬದುಕು ಹಸನಾಗುತ್ತದೆ ಎಂದರು. ಮೌಲ್ಯಯುತವಾದ ವಚನ ಸಾಹಿತ್ಯವನ್ನು ಮಕ್ಕಳಿಗೆ ಬಾಲ್ಯದಿಂದಲೇ ಬೋಧಿಸುವ ಕೆಲಸದಲ್ಲಿ ಪೋಷಕರ ಪಾತ್ರವು ಪ್ರಮುಖವಾಗಿದೆ ಎಂದರು. ಶನಿವಾರಸಂತೆ ಶಿಡಿಗಳಲೆ ಮಠ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲ ದೇಶಿ ಕೇಂದ್ರ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಜಯದೇವ ಸ್ವಾಮೀಜಿ, ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ, ಡಿವೈಎಸ್ಪಿ ಆರ್. ವಿ. ಗಂಗಾಧರಪ್ಪ ಮಾತನಾಡಿದರು. ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್ ನಂದೀಶ್ , ಸಮಾಜ ಸೇವಕ ಕೆ.ಎನ್ ವಸಂತ್, ಮಹಾಸಭಾದ ವಿವಿಧ ಘಟಕಗಳ
ಪ್ರಮುಖರಾದ ಎಂ.ಎಸ್.ಶಿವಾನಂದ, ಶುಭಶೇಖರ್, ಧರ್ಮೇಂದ್ರ, ಕೆ.ಯು.ಎಂ ಬಸವರಾಜ್, ಆದರ್ಶ್, ಎನ್ ಎಂ ರಾಜೇಶ್, ರುದ್ರ ಪ್ರಸನ್ನ, ದೀಪಿಕಾ ಕರುಣ್, ಕಮಲಾ ಉದಯಕುಮಾರ್, ಮನು ಜಗದೀಶ್, ಎಂ.ಕೆ.ಧನರಾಜ್, ಸುಶೀಲಮ್ಮ ಬಸವರಾಜ್,, ಬಿ.ಬಿ. ಲೋಕೇಶ್, ವಿ.ಸಿ.ಅಜಿತ್, ವಿಜಯ ಪಾಲಾಕ್ಷ, ಸರೋಜ ಆ ರಾಧ್ಯ, ಇದ್ದರು. ಅಧ್ಯಕ್ಷತೆ ವಹಿಸಿದ್ದ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಜನರಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ ಹಾಗೂ ಸಹಬಾಳ್ವೆಗೆ ಸಹಕಾರಿಯಾಗಿವೆ ಎಂದರು. ಶಿಕ್ಷಕಿ ಎಚ್.ಎಸ್. ಉಮಾದೇವಿ ಸ್ವಾಗತಿಸಿದರು. ಶಿಕ್ಷಕಿಯವರಾದ ಟಿ.ವಿ.ಶೈಲಾ, ಬಿ.ಬಿ.ಹೇಮಲತಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ವಿದ್ಯಾ ಅಜಿತ್ ವಂದಿಸಿದರು.
ಸಂಭ್ರಮದಿಂದ ಸಾಗಿದ ಮೆರವಣಿಗೆ: ಕುಶಾಲನಗರ ಪಟ್ಟಣದಲ್ಲಿ ಬಸವ ಜಯಂತಿ ಅಂಗವಾಗಿ ಶನಿವಾರ ಸಂಜೆ ನಡೆದ ಅದ್ಧೂರಿ ಮೆರವಣಿಗೆಯು ಗಮನ ಸೆಳೆಯಿತು. ಮೆರವಣಿಗೆಯಲ್ಲಿ ವೀರಗಾಸೆ ನೃತ್ಯ, ನಂದಿದ್ವಜ ಕುಣಿತ, ಮತ್ತು ಮಹಿಳೆಯರ ಸಾಂಪ್ರದಾಯಿಕ- ಜಾನಪದ ನೃತ್ಯಗಳು ಮೆರವಣಿಗೆ ಮುಂಭಾಗದಲ್ಲಿದ್ದರೆ, ಹಿಂಭಾಗದ ಅಲಂಕೃತ ರಥದಲ್ಲಿ ಬಸವೇಶ್ವರರ ಭಾವಚಿತ್ರ ಇಟ್ಟು, ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಆರಂಭಗೊಂಡ ಮೆರವಣಿಗೆ ನಗರದ ಬಿ.ಎಂ.ರಸ್ತೆ,ರಥಬೀದಿ ಮೂಲಕ ಸಾಗಿ ಗಾಯತ್ರಿ ಕಲ್ಯಾಣ ಮಂದಿರದ ಆವರಣದಲ್ಲಿ ಸಮಾಪನಗೊಂಡಿತು. ಮೆರವಣಿಗೆಯಲ್ಲಿ ಮಳೆಯ ಸಿಂಚನ ಕೆಲಕಾಲ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ ಉಂಟಾಯಿತು. ಮೆರವಣಿಗೆಯಲ್ಲಿ ಅಕ್ಕನ ಬಳಗದ ಸದಸ್ಯರು, ನೂರಾರು ಭಕ್ತರು ಬಸವಣ್ಣನವರ ವಚನಗಳನ್ನು ಹಾಡಿದರು. ಬಸವ ಜಯಂತಿ ಅಂಗವಾಗಿ ನಗರದ ಮೆರವಣಿಗೆ ಹಾದಿ ಹಸಿರು ತಳಿರು- ತೋರಣ, ಹಾಗೂ ಕೇಸರಿ ಧ್ವಜಗಳಿಂದ ಕಂಗೊಳಿಸಲಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.