
ಮಡಿಕೇರಿ ಮೇ 19 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಖಾಸಗಿ ಕಂಪನಿಯಾದ ಕಲ್ಯಾಣಿ ಮೋಟಾರ್ಸ್ ಇವರು ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಕಾರ್ಯಕ್ರಮವು ಮೇ, 21 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಲ್ಯಾಣಿ ಮೋಟರ್ಸ್ ನಲ್ಲಿ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 1 ಸೆಟ್ ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ದೂ.ಸಂ. 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ತಿಳಿಸಿದ್ದಾರೆ.









