
ಮಡಿಕೇರಿ ಮೇ 19 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 2024-25ನೇ ಸಾಲಿನ ವಾರ್ಷಿಕೋತ್ಸವವು ಮೇ 20 ರಂದು ನಡೆಯಲಿದೆ. ಅಂದು ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಅಲೂರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದು, ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎಂ.ಸುರೇಶ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಜಯಂತಿ ರೈ ಘನ ಉಪಸ್ಥಿತರಿರಲಿದ್ದಾರೆ.










