ನಾಪೋಕ್ಲು ಮೇ 20 NEWS DESK : ಮಡಿಕೇರಿಯಲ್ಲಿ ನಡೆಯುವ ಸಿಂಧೂರ ವಿಜಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಂಪರ್ಕ ಸಭೆ ಸೋಮವಾರ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಜರುಗಿತು. ನಾಪೋಕ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಪೂರ್ವಭಾವಿ ಸಂಪರ್ಕ ಸಭಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಭಾಗವಹಿಸಿದ್ದು ಈ ಸಂದರ್ಭ ಸಿಂಧೂರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಒಗ್ಗೂಡಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರ್ಯತಂತ್ರದ ಬಗ್ಗೆ ಚರ್ಚಿಸಿ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದಲ್ಲಿ ಶೀವಚಾಳಿಯಂಡ ಅಂಬಿ ಕಾರ್ಯಪ್ಪ, ಜಗದೀಶ್, ಕಂಗಂಡ ಜಾಲಿ ಪೂವಪ್ಪ, ಕನ್ನಂಬೀರ ಸುಧಿ ತಿಮ್ಮಯ್ಯ, ಪಾಡಿಯಮ್ಮಂಡ ಮನು ಮಹೇಶ್, ಚಂದ್ರ ಉಡೋತ್, ಪ್ರಕಾಶ್, ಪಟ್ರಪಂಡ ನಿರನ್, ಚೋಕಿರ ಸಜಿತ್, ಅರೆಯಡ ನಂದ, ರವಿ ಮಕ್ಕಿ ,ಉದಯ ಶಂಕರ್ ಇನ್ನಿತರರು ಭಾಗವಹಿಸಿದ್ದರು.
ವರದಿ : ದುಗ್ಗಳ ಸದಾನಂದ.











