ಮಡಿಕೇರಿ ಮೇ 20 NEWS DESK : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ತರಬೇತಿ ಪಡೆಯಲು ಸರ್ಕಾರಿ ಆದೇಶದಂತೆ ಅಭ್ಯರ್ಥಿಗಳು ವರ್ಗ-1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಲಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು, ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ:4 ಸಾವಿರ ದಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿರುತ್ತದೆ. ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ.10 ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ.100 ರ ಛಾಪಾ ಕಾಗದಲ್ಲಿ ಬರೆದುಕೊಡತಕ್ಕದ್ದು. ಅರ್ಜಿ ನಮೂನೆಯನ್ನು ಈ ಕಚೇರಿಯಿಂದ ಪಡೆದು ಜೂನ್, 16 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ. 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.











