
ಮಡಿಕೇರಿ ಮೇ.22 NEWS DESK : ಜಿಲ್ಲೆಯಲ್ಲಿ ಶುಂಠಿಯನ್ನು ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕುಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಈ ಸಂಬಂಧ ಕುಶಾಲನಗರ ಎಪಿಸಿಎಂಎಸ್ ಮತ್ತು ಸೋಮವಾರಪೇಟೆ ಎಪಿಸಿಎಂಎಸ್ ಇಲ್ಲಿ ಹಸಿಶುಂಠಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಪ್ರೂಟ್ಸ್ ಐಡಿ ಹೊಂದಿರುವ ರೈತರಿಂದ ಮಾತ್ರ ನೋಂದಣಿ ಮಾಡಿಸಿಕೊಂಡು ಗುಣಮಟ್ಟದ ಹಸಿಶುಂಠಿಯನ್ನು (ತೋಟಗಾರಿಕ ಪರಿಣಿತ ಅಧಿಕಾರಿಗಳಿಂದ ದೃಢೀಕರಿಸಿ) ಖರೀದಿ ಮಾಡಲಾಗುವುದು. ಪ್ರತಿ ಕ್ವಿಂಟಾಲ್‍ಗೆ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಗೆ ರೂ.2,445 ಮಾರುಕಟ್ಟೆ ಬೆಲೆಯನ್ನು ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಹಂಪಣ್ಣ ತಿಳಿಸಿದ್ದಾರೆ.









