ಮಡಿಕೇರಿ ಮೇ 22 NEWS DESK : ಕೊಡಗು ಪತ್ರಕರ್ತರ ಸಂಘ ಸೋಮವಾರಪೇಟೆ ತಾಲ್ಲೂಕು ಘಟಕದ ವತಿಯಿಂದ ಮೇ 25 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಹಿರಿಯ ವಕೀಲರು ಮತ್ತು ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಉದ್ಯಮಿ ಬಿ.ಸಂಜೀವ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್, ಉದ್ಯಮಿ ಗಿರೀಶ್ ಮಲ್ಲಪ್ಪ ಪಾಲ್ಗೊಳ್ಳಲಿದ್ದಾರೆ.











