ಮಡಿಕೇರಿ ಮೇ 22 NEWS DESK : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ ಮತ್ತು ನಿವಾರಿಸುವಿಕೆ)-2013 ರ ಕಾಯ್ದೆಗೆ ಸಂಬಂದಿಸಿದಂತೆ ಸಂಪನ್ಮೂಲ ವ್ಯಕ್ತಿಗಳಾದ ಪಿಯಾಲಿ ಬೋಪಣ್ಣ ಅವರು ವಿಡಿಯೊ ಸಂವಾದ ಮೂಲಕ ಮಾಹಿತಿ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ವಿಡಿಯೊ ಸಂವಾದದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು, ಸ್ಥಳೀಯ ದೂರು ನಿವಾರಣ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಆಂತರಿಕ ದೂರು ನಿವಾರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಇತರರು ಪಾಲ್ಗೊಂಡಿದ್ದರು.











