Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*

ಮೇ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 NEWS DESK : ನಗರದಲ್ಲಿ ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣು ಘಮಘಮಿಸುತ್ತಿದೆ. ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಹಾಪ್ ಕಾಮ್ಸ್ ವತಿಯಿ0ದ ನಗರದ ಹಾಪ್ ಕಾಮ್ಸ್ ನಲ್ಲಿ ಮೇ 26ರ ವರೆಗೆ ನಡೆಯುವ `ಮಾವು ಮತ್ತು ಹಲಸು ಮೇಳವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾವು ಮತ್ತು ಹಲಸು ಮೇಳದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಜನರು ಬರುವುದರಿಂದ ಬಹಳ ಖುಷಿ ಪಡುತ್ತೇನೆ ಎಂದರು. ಮಾವು ಮತ್ತು ಹಲಸು ಮೇಳವನ್ನು ಈ ವರ್ಷವೂ ನಾಲ್ಕು ದಿನಗಳವರೆಗೆ ಏರ್ಪಡಿಸಲಾಗಿದೆ ಎಂದರು. ಮಾವಿನ ಹಣ್ಣುಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚು ಇರುತ್ತದೆ ಹಾಗೂ ತೋಟಗಾರಿಕೆ ಇಲಾಖೆ ಮತ್ತು ಹಾಪ್ ಕಾಮ್ಸ್ ವತಿಯಿಂದ ಈ ಮೇಳ ನಡೆಯುತ್ತಿದೆ ಎಂದು ಹೇಳಿದರು. ಕೊಡಗಿನಲ್ಲಿ ಮಾವಿನ ಮೇಳ ಆಯೋಜಿಸಿರುವುದರಿಂದ ಜನರಿಗೆ ಬೇರೆ ಬೇರೆ ರೀತಿಯ ಮಾವಿನ ಹಣ್ಣುಗಳು ಸಿಗಲು ಸಾಧ್ಯವಾಗುತ್ತದೆ ಎಂದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ಯೋಗೇಶ್ ಅವರು ಮಾತನಾಡಿ ನೈಸರ್ಗಿಕವಾಗಿ ಮಾಗಿಸಿದ ಕಾರ್ಬೈಡ್ ಮುಕ್ತ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ತಿಳಿಸಿದರು. ಮಾವು ಮೇಳದಲ್ಲಿ ಮಲಗೋವಾ, ಸಿಂಧೂರಿ, ರಸಪೂರಿ, ತೋತಾಪುರಿ, ಬಾದಾಮಿ, ಮಲ್ಲಿಕಾ, ದಸೇರಿ ಹಣ್ಣುಗಳನ್ನು ನೈಸರ್ಗಿಕವಾಗಿ ಮಾಗಿಸಿ ರೈತರಿಂದ ಗ್ರಾಹಕರಿಗೆ ಯೋಗ್ಯ ಬೆಲೆಗೆ ನೇರ ಮಾರಾಟ ಮಾಡಲಾಗುತ್ತದೆ ಎಂದು ಯೋಗೇಶ್ ಹೇಳಿದರು. ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷರಾದ ಮಲ್ಲಂಡ ಮಧುದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಬಿ.ಎ.ಹರೀಶ್, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಎಂ.ಮನೋಹರ್, ಸುವಿನ್ ಗಣಪತಿ, ಉಮೇಶ್‍ರಾಜ ಅರಸ್, ಸುಧೀರ್, ಹಾಪ್‍ಕಾಮ್ಸ್ ಸಿಇಒ ರೇಷ್ಮ ಗಿರೀಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಇತರರು ಇದ್ದರು.  ಮೇಳದಲ್ಲಿ ಮಾವಿನ ಹಣ್ಣಿನ ವಿವಿಧ ತಳಿಗಳಾದ ಮಲಗೋಬ, ಸಿಂದೂರ, ರಸಪುರಿ, ತೋತಪುರಿ, ಬಾದಾಮಿ, ಮಲ್ಲಿಕ, ದಶೇರಿ ತಳಿಗಳು ಗಮನ ಸೆಳೆಯುತ್ತಿದೆ. ತುಮಕೂರು, ಕೋಲಾರ, ರಾಮನಗರ, ಮಂಡ್ಯ ವಿಭಾಗಗಳಿಂದ ಆಗಮಿಸಿದ ಬೆಳೆಗಾರರು ತಾವು ಬೆಳೆದ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮಾಡುತ್ತಿದ್ದಾರೆ. ಸುಮಾರು 2 ಕೆ.ಜಿ. ಗೂ ಹೆಚ್ಚಿನ ತೂಕದ ‘ವಾಲಜ’ ಹೆಸರಿನ ಭಾರೀ ಗಾತ್ರದ ಮಾವು ಗ್ರಾಹಕರ ಗಮನ ಸೆಳೆಯುತ್ತಿದೆ. ಹಲಸಿನ ಕಸಿ ಗಿಡಗಳು :: ದಕ್ಷಿಣ ಕನ್ನಡದ ನವನೀತ ನರ್ಸರಿಯ ಮಳೆಗೆಯಲ್ಲಿ ಕಸಿಗಟ್ಟಿದ ವಿವಿಧ ಹಲಸಿನ ಗಿಡಗಳನ್ನು ಮಾರಾಟಕ್ಕೆ ಇಡಲಾಗಿದೆ. ಗಮ್ ಲೆಸ್ ಹಲಸು, ಚೆಂಪಡ್ಕ, ಸಿಂಗಾಪುರ ಬ್ಲಾಕ್, ಡಯಾಂಗ್ ಸೂರ್ಯ ಮೊದಲಾದ ತಳಿಗಳ ಗಿಡಗಳು ಆಸಕ್ತರಿಗೆ ಲಭ್ಯವಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.