
ಮಡಿಕೇರಿ ಮೇ 23 NEWS DESK : ಪ್ರಸಕ್ತ (2025-26) ಸಾಲಿಗೆ ಮಡಿಕೇರಿ ತಾಲ್ಲೂಕು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಪೆರಾಜೆಯ ಮೆಟ್ರಿಕ್ ಪೂರ್ವ ಬಾಲಕ ವಿದ್ಯಾರ್ಥಿ ನಿಲಯಕ್ಕೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಸ್ಥಾನಗಳು ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದು. ವಿದ್ಯಾರ್ಥಿ ನಿಲಯದಲ್ಲಿ ಪೌಷ್ಠಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್ ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡ ಇಲಾಖೆಯ ವೆಬ್‍ಸೈಟ್ https://tw.kar.nic.in ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (SATS ID ಯೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಪೆರಾಜೆ ದೂರವಾಣಿ ಸಂಖ್ಯೆ: 6363128975 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ 9480843155 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.









