Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು : ಸೆಸ್ಕ್ ವಿಭಾಗದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ : ರಮೇಶ್ ಬಂಡಿಸಿದ್ದೇಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು : ಸೆಸ್ಕ್ ವಿಭಾಗದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ : ರಮೇಶ್ ಬಂಡಿಸಿದ್ದೇಗೌಡ*

ಮೇ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ. ನಗರದ ಸೆಸ್ಕ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುವ ಹಿನ್ನೆಲೆ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಕ್ಕೆ ಹಾನಿಯಾಗುವುದು ಕಂಡು ಬರುತ್ತದೆ. ಆದ್ದರಿಂದ ಆಯಾಯ ಸಂದರ್ಭದಲ್ಲಿಯೇ ವಿದ್ಯುತ್ ಕಂಬ ಹಾಗೂ ಪರಿವರ್ತಕರಗಳ ಬದಲಾವಣೆಗೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು. ಕಳೆದ ಬಾರಿ ಮುಂಗಾರು ಅವಧಿಯಲ್ಲಿ 4 ಸಾವಿರಕ್ಕೂ ಹೆಚ್ಚು ಕಂಬಗಳು ಹಾನಿಯಾಗಿತ್ತು, ಹಾಗೆಯೇ ಹಲವು ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದವು, ಆ ಸಂದರ್ಭದಲ್ಲಿ 24 ಗಂಟೆಯೊಳಗೆ ಸರಿಪಡಿಸುವ ಕಾರ್ಯ ನಡೆದಿತ್ತು ಎಂದು ಇದೇ ಸಂದರ್ಭದಲ್ಲಿ ವಿವರಿಸಿದರು. ಮುಂಗಾರು ಸಂದರ್ಭದಲ್ಲಿ ವಿದ್ಯುತ್ ಅವಘಡಗಳನ್ನು ತಪ್ಪಿಸಿ, ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹೆಚ್ಚಿನ ಲೈನ್‍ಮೆನ್ ಹಾಗೂ ಗ್ಯಾಂಗ್‍ಮೆನ್‍ಗಳನ್ನು ನಿಯೋಜಿಸಲಾಗಿದೆ ಎಂದರು. ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುನ್ನೆಚ್ಚರ ವಹಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಲೈನ್‍ಮೆನ್‍ಗಳಿಗೆ ಸ್ಮಾರ್ಟ್ ಪೋನ್‍ಗಳನ್ನು ಸಹ ವಿತರಿಸಲಾಗಿದೆ. ಟೋಲ್ ಫ್ರೀ ಸಂಖ್ಯೆಯನ್ನು ಸಹ ನೀಡಲಾಗುತ್ತಿದ್ದು, ಸಾರ್ವಜನಿಕರು ವಿದ್ಯುತ್ ಅಡಚಣೆ ಸಂಬಂಧಿಸಿದಂತೆ ಮಾಹಿತಿ ನೀಡಬಹುದಾಗಿದೆ ಎಂದು ರಮೇಶ್ ಬಂಡಿಸಿದ್ದೇಗೌಡ ವಿವರಿಸಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ 650 ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ಬದಲಿಸಲಾಗಿದೆ. ವಿದ್ಯುತ್ ಪೂರೈಕೆ ಸಂಬಂಧಿಸಿದಂತೆ ಸಮಸ್ಯೆಗಳು ಬರದಂತೆ ಎಲ್ಲಾ ರೀತಿಯ ಮುನ್ನೆಚ್ಚರ ವಹಿಸಲಾಗಿದೆ ಎಂದರು. ಸೆಸ್ಕ್ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು, ಸಿಬ್ಬಂದಿಗಳು ಸಮನ್ವಯತೆಯಿಂದ ಎಲ್ಲರ ವಿಶ್ವಾಸ ಪಡೆದು ಕೆಲಸ ನಿರ್ವಹಿಸಲಿದ್ದಾರೆ ಎಂದರು. ಮಾದಾಪುರದಲ್ಲಿ ಉಪ ವಿದ್ಯುತ್ ಘಟಕ ನಿರ್ಮಾಣಕ್ಕೆ ಒಂದು ವಾರದಲ್ಲಿ ಚಾಲನೆ ನೀಡಲಾಗುವುದು. ಹಾಗೆಯೇ ಮೂರ್ನಾಡು ಮತ್ತು ಹುದಿಕೇರಿಯಲ್ಲಿ ವಿದ್ಯುತ್ ಉಪ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ವಿದ್ಯುತ್ ಅವಘಡಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಲ್ಲಿ ತಕ್ಷಣವೇ ಸ್ಪಂದಿಸಲಾಗುವುದು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಕೃಷಿಕರಿಗೆ 10 ಹೆಚ್‍ಪಿ ಉಚಿತ ವಿದ್ಯುತ್ ಪೂರೈಕೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಈ ಬಗ್ಗೆ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚೆ ನಡೆದಿದ್ದು, ಆದಷ್ಟು ಶೀಘ್ರ ಪರಿಹಾರ ದೊರೆಯಲಿದೆ. ಕೊಡಗು ಜಿಲ್ಲೆಯ ಜನರಿಗೆ ಉತ್ತಮ ಸ್ಪಂದನೆ ದೊರೆಯಲಿದೆ ಎಂದರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಡಿಯಲ್ಲಿ ಲೈನ್‍ಮೆನ್‍ಗಳನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಹಾಗೆಯೇ ಗ್ಯಾಂಗ್‍ಮೆನ್‍ಗಳನ್ನುಸಹ ನಿಯೋಜಿಸಲಾಗುತ್ತದೆ. ಜೂನ್, 01 ರಿಂದ ಟೋಲ್ ಫ್ರೀ ಸಂಖ್ಯೆ ದೊರೆಯಲಿದೆ ಎಂದು ತಿಳಿಸಿದರು. ಲೈನ್‍ಮೆನ್‍ಗಳಿಗೆ ಇದೇ ಸಂದರ್ಭದಲ್ಲಿ ಕಿಟ್‍ಗಳನ್ನು ವಿತರಿಸಲಾಯಿತು. ಅಧೀಕ್ಷಕರ ಎಂಜಿನಿಯರ್ ಸೋಮಶೇಖರ್ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಎಂ.ರಾಮಚಂದ್ರ, ಬೃಹತ್ ಕಾಮಗಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಾದೇಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.