ಮಡಿಕೇರಿ ಮೇ 24 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗವು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಭೇಟಿಯಾದ ಕಾಂಗ್ರೆಸ್ ಮುಖಂಡರು, ಕೊಡಗಿನ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಹೊಸ ಬಸ್ ಮಾರ್ಗಗಳನ್ನು ನೀಡುವ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ನಿಯೋಗದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಾನಂಡ ಪ್ರಥ್ಯು, ದೇವಸ್ಥಾನದ ಅಧ್ಯಕ್ಷ ಅದೇಂಗಡ ವಾಸು ಬೆಳ್ಳಿಯಪ್ಪ, ಬಾಳಲೆ ಗ್ರಾ.ಪಂ ಸದಸ್ಯ ಅದೇಂಗಡ ವಿನು ಉತ್ತಪ್ಪ ಇದ್ದರು.











