
ಸೋಮವಾರಪೇಟೆ ಮೇ 24 NEWS DESK : ಡಾಲ್ಫಿನ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಂಥಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದ ಬೇಸಿಗೆ ಹಾಕಿ ತರಬೇತಿ ಶಿಬಿರದ ಸಮಾರೋಪಗೊಂಡಿತು. ಡಾಲ್ಫಿನ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಎಂ.ಇ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಹಾಕಿ ಆಟಗಾರರಾದ ಸಿ.ಎಲ್.ಸುಬ್ಬಯ್ಯ, ಕುಶಾಲನಗರದ ಉದ್ಯಮಿ ಬಿ.ಆರ್.ವೇಣು, ಮಾಜಿ ಸೈನಿಕ ಮಹೇಶ್ ಹಾಗೂ ಹಾಕಿ ಕೋಚ್ ಬಿ.ಎಲ್. ಮಂಜುನಾಥ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಆಟಗಾರರಾದ ಬಿ.ಕೆ. ಹಾಲಪ್ಪ, ಲಕ್ಷ್ಮೀಕಾಂತ್, ಬಿ.ಎಂ. ಸುರೇಶ್, ಶಶಿ, ಅಂತಾರಾಷ್ಟ್ರೀಯ ಆಟಗಾರ ಆಭರಣ್, ಡಾಲ್ಫಿನ್ಸ್ ಸ್ಪೋಟ್ರ್ಸ್ ಕ್ಲಬ್ ಗೌರವಾಧ್ಯಕ್ಷ ಹೆಚ್.ಎನ್. ಅಶೋಕ್, ಕಾರ್ಯದರ್ಶಿ ಬಿ.ಎನ್.ಮಂಜುನಾಥ್, ಸಹ ಕಾರ್ಯದರ್ಶಿ ಮಹೇಶ್, ಖಜಾಂಚಿ ಕೆ.ಜೆ. ಗಿರೀಶ್, ಜೇಸಿ ಮಾಜಿ ಅಧ್ಯಕ್ಷೆ ಮಾಯಾ ಗಿರೀಶ್ ಇದ್ದರು. ಶಿಬಿರಾರ್ಥಿಗಳಿಗೆ ಸರ್ಟಿಪಿಕೇಟ್ ವಿತರಿಸಲಾಯಿತು.









