
ಮಡಿಕೇರಿ NEWS DESK ಮೇ 25 : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರೆಡ್ ಅಲ್ಲೆರ್ಟ್ ಘೋಷಿಸಿರುವುದರಿಂದ ಹಾಗೂ ಹೆಚ್ಚಿನ ಗಾಳಿ-ಮಳೆ ಇರುವುದರಿಂದ, ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 26.05.2025 ಮತ್ತು 27.05.2025 ರಂದು 2 ದಿನಕ್ಕೆ ಸೀಮಿತವಾಗಿ (ಪೋಷಣ್ ಟ್ರಾಕರ್ ಕೆಲಸ ಹೊರತುಪಡಿಸಿ)ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.








