
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಲಪಾತ, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರಿಗಿಳಿಯದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ನದಿ ಮತ್ತು ಜಲಪಾತಗಳಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮ ಕೈಗೊಂಡಿದೆ.











