
ಮಡಿಕೇರಿ ಮೇ 27 NEWS DESK : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರಕುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಪಟ್ಟಡ ಪೂವಣ್ಣ ಸಲಹೆ ನೀಡಿದರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಸೃಷ್ಟಿಕರ್ತನು ಎಲ್ಲಾ ವ್ಯಕ್ತಿಗಳಿಗೂ ಅಘೋಚರ ಶಕ್ತಿ ನೀಡಿರುತ್ತಾನೆ. ಅದನ್ನು ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಇದರೊಂದಿಗೆ ಜೀವನದಲ್ಲಿ ಋಣಾತ್ಮಕ ವಿಚಾರಗಳನ್ನು ತೆಗೆದು ಹಾಕಿದಾಗ ಮೇಲೇರಲು ಸಾಧ್ಯ. ಸಿಕ್ಕ ಅವಕಾಶವನ್ನು ಸಾಧ್ಯ ಪಡಿಸಿಕೊಳ್ಳುವ ಕೆಲಸ ವಿದ್ಯಾರ್ಥಿ ಜೀವನದಲ್ಲಿ ಮಾಡಬೇಕೆಂದರು. ಜೀವನದ ಮೌಲ್ಯಗಳೊಂದಿಗೆ ಮುಂದಿನ ಭವಿಷ್ಯ ನಿರ್ಧಾರದ ಗುರಿಹೊಂದಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು. ಭೂ ದಾಖಲೆಗಳ ಸಹಾಯಕ ನಿರ್ದೇಶಕ ಬಾನಂಗಡ ಅರುಣ ಮಾತನಾಡಿ ವಿದ್ಯಾರ್ಥಿ ಜೀವನದಿಂದಲೇ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಲು ಯುವಜನರು ಮುಂದಾಗಬೇಕು. ಮದ್ಯಪಾನ, ಮಾದಕ ದ್ರವ್ಯಗಳಿಗೆ ದಾಸರಾಗದೆ ನಮ್ಮ ಸುತ್ತಮುತ್ತಲಿರುವ ಅಂತಹ ವ್ಯಕ್ತಿಗಳನ್ನು ವ್ಯಸನ ಮುಕ್ತರನ್ನಾಗಿಸುವ ಪ್ರಯತ್ತ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಗೀಳಿಗೆ ಬೀಳದೆ ಜ್ಞಾನಗಳಿಕೆಗೆ ಹೆಚ್ಚಿನ ಒತ್ತನ್ನು ನೀಡಿ ಉತ್ತಮ ವ್ಯಕ್ತಿತ್ವದೊಂದಿಗೆ ಕುಟುಂಬದ ಆಧಾರ ಸ್ಥಂಭವಾಗಿ ಸಮಾಜದಲ್ಲಿ ಧೀಮಂತ ವ್ಯಕ್ತಿಗಳಾಗಿ ಬಾಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾವೇರಿ ವಿದ್ಯಾ ಸಂಸ್ಥೆಯ ಅದ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಆಡಳಿತ ಮಂಡಳಿಯು ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯಲ್ಲಿ ಉನ್ನತ ಮಟ್ಟದ ಸಾಧನೆ ಮಾಡಬೇಕು. ಧೀಮಂತ ವ್ಯಕ್ತಿಗಳನ್ನು ಜೀವನಕ್ಕೆ ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ವಿದ್ಯಾರ್ಥಿ ಕ್ಷೇಮಪಾಲನ ಸಮಿತಿ ಮುಖ್ಯಸ್ಥರಾದ ಹೆಚ್.ವಿ.ನಾಗರಾಜು, ವಿದ್ಯಾರ್ಥಿ ನಾಯಕರುಗಳು, ಕಾವೇರಿ ಶಿಕ್ಷಣ ಸಂಸ್ಥೆಯ ನಿರ್ದೇಶಕರುಗಳಾದ ಸಿ.ಡಿ. ಮಾದಪ್ಪ , ಎನ್.ಕೆ.ಮೊಣ್ಣಪ್ಪ, ವಾಣಿ, ಸುಭಾಸ್, ಅಚ್ಚಯ್ಯ, ಉಪಸ್ಯಾಸಕರಾದ ಡಾ.ವೀಣಾ, ಅಂಬಿಕಾ, ರಾಘವೇಂದ್ರ, ಸೋಮಣ್ಣ, ನಿರ್ಮಿತ, ಬೋಜಮ್ಮ, ಕಾವೇರಮ್ಮ ಗಾಯಿತ್ರಿ, ಅನುಪಮ, ಆಡಳಿತಾತ್ಮಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪೋಷಕರೂ ಹಾಜರಿದ್ದರು. ನಂತರ ವಿದ್ಯಾರ್ಥಿಗಳಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡಾನ 2024 -25 ನೇ ಸಾಲಿನಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ 2024 -25 ನೇ ಸಾಲಿನಲ್ಲಿ ವಿವಿಧ ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕ, ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು . ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.









