
ಗೋಣಿಕೊಪ್ಪ ಮೇ 27 NEWS DESK : ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಜಂಟಿ ಆಶ್ರಯದಲ್ಲಿ ಮೇ 31 ರಂದು ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆ’ಯಲ್ಲಿ ಲೇಖಕಿ ಉಳುವಂಗಡ ಕಾವೇರಿ ಉದಯ ಬರೆದ 190ನೇ ಹೆಜ್ಜೆ, 17 ಲೇಖಕರು ಬರೆದ 191ನೇ ಹೆಜ್ಜೆ ಹಾಗೂ ಲೇಖಕಿ ಕೊಟ್ಟಂಗಡ ಕವಿತ ವಾಸುದೇವ ಬರೆದ 192ನೇ ಹೆಜ್ಜೆ ಪುಸ್ತಕ ಬಿಡುಗಡೆ ಹಾಗೂ ಸಾಹಿತಿ ಮುದ್ದಿಯಡ ಕುಶ ಪೊನ್ನಪ್ಪ ದತ್ತಿನಿಧಿ ಕಥಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊಡವ ಭಾಷೆಯ ಹಾಡುಗಾರಿಕೆ, ಓದುವುದು ಮತ್ತು ಹಾಸ್ಯ ಸ್ಪರ್ಧೆ ನಡೆಯಲಿದೆ. ಅಂದು ಪೂರ್ವಾಹ್ನ 10 ಗಂಟೆಗೆ ಗೋಣಿಕೊಪ್ಪ ಕಾವೇರಿ ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ‘ಕೊಡವ ತಕ್ಕ್ ಎಳ್ತ್‌ಕಾರಡ ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ, ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಾಳೇಟಿರ ಕಾವೇರಪ್ಪ, ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಕೈಬಿಲೀರ ಪಾರ್ವತಿ ಬೋಪಯ್ಯ, ಮೇಚಮಡ ಮಲ್ಲಿಗೆ ಪೂವಮ್ಮ, ಮುದ್ದಿಯಡ ಪದ್ಮ ಕುಶಾಲಪ್ಪ, ಚಿಂಡಮಾಡ ಸರಿತ ಅಶೋಕ್, ಲೇಖಕಿಯರಾದ ಉಳುವಂಗಡ ಕಾವೇರಿ ಉದಯ ಹಾಗೂ ಕೊಟ್ಟಂಗಡ ಕವಿತ ಬೋಜಮ್ಮ ಪಾಲ್ಗೊಳ್ಳಲಿದ್ದಾರೆ. ಕೊಡವ ಭಾಷೆ, ಸಾಹಿತ್ಯದ ಅಭಿಮಾನಿಗಳೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿ ಕೊಡವ ತಕ್ಕ್ ಎಳ್ತ್‌ಕಾರಡ ಕೂಟ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9880584732, 9448326014 ಗಳನ್ನು ಸಂಪರ್ಕಿಸಬಹುದಾಗಿದೆ.









