
ಬೆಂಗಳೂರು NEWS DESK ಮೇ 27 : ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ಅಭಿನಯಿಸಿರುವ ಖ್ಯಾತ ನಟ ಅನಂತ್ ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಅನಂತ್ ನಾಗ್ ಅವರು 300 ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದು, ಪದ್ಮಭೂಷಣ ಪ್ರಶಸ್ತಿ ದೊರೆತ ಬಗ್ಗೆ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.








