ಮಡಿಕೇರಿ NEWS DESK ಮೇ 27 : ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ 08272-228396, ವಿರಾಜಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-257328, ಸೋಮವಾರಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-282045, ಕುಶಾಲನಗರ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು ವಿಪತ್ತು ನಿರ್ವಹಣಾ ಕೇಂದ್ರ-08274-249700 ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು.










