
ಮಡಿಕೇರಿ ಮೇ 28 NEWS DESK : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ 619 ಅಂಕಗಳಿಸಿ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿನಿ ಕೂರನ ಇಂಚರ ಕಿಶೋರ್, ಶಾಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೇಕಡ ಮೋಕ್ಷ ಬೋಪಣ್ಣ ಹಾಗೂ ತೃತೀಯ ಸ್ಥಾನ ಪಡೆದ ಮಚ್ಚಾಂಡ ಚಕ್ಷ ಕಾವೇರಮ್ಮ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕರಾದ ನಾಟೊಳಂಡ ವಿಜು, ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಹಾಗೂ ಇತರ ಶಿಕ್ಷಕ ವೃಂದದವರು ಹಾಜರಿದ್ದರು.









