
ಬೆಂಗಳೂರು ಮೇ 28 NEWS DESK : ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು 17.21 ಕೋಟಿ ರೂ.ಗಳ ಸಾಮಾನ್ಯ ಡಿವಿಡೆಂಡ್, 68.69 ಕೋಟಿ ರೂ.ಗಳ ವಿಶೇಷ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂ.ಗಳ ಮೊತ್ತದ ಚೆಕ್ ನ್ನು ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು. ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎನ್ .ಮಂಜುಳಾ, ಖುಷ್ಬೂ ಗೋಯಲ್ ಚೌಧರಿ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









