Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ ಸಂಸದ ಯದುವೀರ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ ಸಂಸದ ಯದುವೀರ್*

ಮೇ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು NEWS DESK ಮೇ 28 : ಕನ್ನಡ ಭಾಷೆ ತಮಿಳಿನಿಂದ ಬಂದಿದ್ದು ಎಂದು ಚಿತ್ರನಟ ಕಮಲ್‌ ಹಾಸನ್‌ ಹೇಳರುವುದು ಖಂಡನಾರ್ಹ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಕಮಲ್‌ ಅತ್ಯದ್ಭುತ ನಟ, ಇಡೀ ಭಾರತದಲ್ಲಿಯೇ ಅತ್ಯಂತ ಮನೋಜ್ಞ ನಟ ಎಂದು ಖ್ಯಾತಿ ಗಳಿಸಿದ್ದಾರೆ. ನಾನು ಕೂಡ ಅವರ ಚಿತ್ರಗಳನ್ನು ನೋಡಿದ್ದೇನೆ. ಹಾಗೆಂದು ಅವರು ಹೇಳಿದ್ದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕನ್ನಡ ಭಾಷೆಯ ಮೇಲೆ ಹಲವಾರು ಭಾಷೆಗಳು ಪ್ರಭಾವ ಬೀರಿದೆ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವುದು ಸರಿಯಲ್ಲ. ನಮ್ಮ ಲಿಪಿ ಕೂಡ ಇತಿಹಾಸದಲ್ಲಿ ದಾಖಲಾಗಿದೆ. ಇದನ್ನ ಅವರು ತಿಳಿದುಕೊಳ್ಳಬೇಕು ಎಂದರು. ತಮಿಳು ಮತ್ತು ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಹೀಗಿರುವಾಗ ಕಮಲ್‌ ಹಾಸನ್‌ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು. ನಮ್ಮ ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಯು ರಾಜ್ಯದ ಹೆಮ್ಮೆಯಾಗಿದೆ. ಇದನ್ನು ನಿರ್ಮಾಣ ಮಾಡಿರುವುದೇ ಕನ್ನಡಿಗರು. ಜವಾಹರ ಲಾಲ್‌ ನೆಹರೂ ಅವರಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು *ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌* ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್‌, ದೇಶದ ಅತ್ಯಂತ ಹೆಮ್ಮೆಯ ಸಂಸ್ಥೆಯಾಗಿರುವ ಎಚ್‌ಎಚ್‌ಎಲ್‌ ಅನ್ನು ಕೊಂಡೊಯ್ಯಬೇಕು ಎಂದು ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸೇರಿದಂತೆ ಹಲವಾರು ರಾಜ್ಯಗಳು ಮನವಿ ಸಲ್ಲಿಸವೆ. ಆದರೆ ಇದನ್ನು ಯಾವುದೇ ಕಾರಣಕ್ಕೂ ಕರ್ನಾಟಕದಿಂದ ಹೊರಹೋಗುವುದಕ್ಕೆ ಬಿಡುವುದಿಲ್ಲ ಎಂದರು. 1940ರಲ್ಲಿ ಈ ಸಂಸ್ಥೆ ಸ್ಥಾಪಿಸಬೇಕು ಎಂದು ಇಂಟರ್‌ ಕಾಂಟಿನೆಂಟ್‌ ಕಾರ್ಪ್‌ ಅಧ್ಯಕ್ಷ ವಿಲಿಯಂ ಡಿ. ಪಾವ್ಲಿ, ವಾಲ್‌ಚಂದ್‌ ಅವರು ಪ್ರಸ್ತಾಪಿಸಿದಾಗ ಮೈಸೂರಿನ ಮಹಾರಾಜರು ಇದಕ್ಕೆ ಒಪ್ಪಿಗೆ ಸೂಚಿಸಿದರು. ಅಂದು ಸುಮಾರು 700 ಎಕರೆಗಳನ್ನು ಉಚಿತವಾಗಿ ನೀಡಿತು. ಕನ್ನಡಿಗರಿಗೆ ಸೇರಿ ಇದನ್ನು ಸ್ಥಾಪಿಸಲು ಪ್ರಮುಖ  ಪಾತ್ರ ವಹಿಸಿದ್ದರು ಎಂದು ಸಂಸದರು ವಿವರಿಸಿದರು. 1964ರಲ್ಲಿ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಈ ಸಂಸ್ಥೆಯನ್ನು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ಎಂದು ಮರು ನಾಮಕರಣ ಮಾಡಲಾಯಿತು ಎಂದು ಯದುವೀರ್‌ ತಿಳಿಸಿದರು. ಇಂಥ ಸಂಸ್ಥೆಯು ಇಲ್ಲಿಯೇ ಇರಬೇಕು. ಇದರ ಅಭಿವೃದ್ಧಿಗೆ ಎಲ್ಲ ಸೌಕರ್ಯಗಳನ್ನು ಒದಗಿಸಲು ನಾವು ಸಜ್ಜಾಗಿದ್ದೇವೆ ಎಂದು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವವರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಕೇಂದ್ರ ಸರ್ಕಾರಕ್ಕೆ ನಾವು ಕೂಡ ಮನವರಿಕೆ ಮಾಡಿಕೊಡುತ್ತೇವೆ ಎಂದರು. ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು. ಈ ಸಭೆಯಲ್ಲಿ ಭಾಗವಹಿಸಿ ಕರ್ನಾಟಕದ ಪರವಾಗಿ ಮಾತನಾಡಬೇಕಿತ್ತು. ಆದರೆ ಈಗ ಕೇಂದ್ರದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈಗಾಗಲೇ ಗೈರು ಹಾಜರಿ ಬಗ್ಗೆ ಎಲ್ಲ ಕಡೆ ಪ್ರಶ್ನಿಸಲಾಗಿದೆ ಎಂದು ಯದುವೀರ್‌ ವಿವರಿಸಿದರು. ಕನ್ನಡಿಗರಿಂದ, ಕನ್ನಡಿಗರ ನಾಯಕತ್ವದಲ್ಲಿ ಬೆಳೆದಿರುವ ಈ ಸಂಸ್ಥೆಯನ್ನು ಸಂರಕ್ಷಣೆ ಮಾಡುವ ಬಗ್ಗೆ, ಈ ಎಚ್‌ಎಎಲ್‌ ಕಾರ್ಯಾನೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮುಂದುವರಿಯಲೇಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಒತ್ತಡ ಹೇರೇಕು ಎಂದು ಸಂಸದರು ತಿಳಿಸಿದರು. *ಡಿಕೆಶಿ ಹೇಳಿಕೆಗೆ ಯದುವೀರ್‌ ಆಕ್ಷೇಪ* ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಹೇಳಿಕೆ ನೀಡಿ, ಎಚ್‌ಎಎಲ್‌ ನೆಹರೂ ಅವರ ಕೊಡುಗೆ ಎಂದಿದ್ದಾರೆ. ಆದರೆ ಇದಕ್ಕೆ ಸ್ಪಷ್ಟೀಕರಣ ನೀಡಲು ಬಯಸಿದ್ದು, ವಾಲ್‌ಚಂದ್‌ ಅವರು ಇಂಥ ಸಂಸ್ಥೆ ಬೇಕು ಎಂದು ಪ್ರಸ್ತಾಪಿಸಿದ್ದರು. ಇದಕ್ಕೆ ನಮ್ಮ ಮೈಸೂರು ಮಹಾರಾಜರು ಸ್ಪಂದಿಸಿ 700 ಎಕರೆ ಜಮೀನು ಮಂಜೂರು ಮಾಡಿದರು. ನಮ್ಮ ಮೈಸೂರು ಮಹಾರಾಜರು ಇದಕ್ಕೆ ಬಂಡವಾಳ ಹೂಡಿದರು ಎಂದು ಮಾಹಿತಿ ನೀಡಿದರು. ಎರಡನೇ ಮಹಾಯುದ್ಧದಲ್ಲಿ ಎಚ್‌ಎಎಲ್‌ ಬೃಹತ್‌ ಕೊಡುಗೆಗಳನ್ನು ನೀಡಿದೆ. ಭಾರತದ ಇತಿಹಾಸದಲ್ಲಿ ಎಚ್‌ಎಎಲ್‌ ಕೊಡುಗೆ ಸದಾ ಸ್ಮರಣೀಯ ಎಂದು ಯದುವೀರ್‌ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.