ಮಡಿಕೇರಿ NEWS DESK ಮೇ 30 : ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ನಗರದ ಕನ್ನಿಕಾ ಲೇಔಟ್ ನಿವಾಸಿ ದೇವಜನ ಜಗದೀಶ್ (56) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮಡಿಕೇರಿ ಕೋಟೆ ಸಮೀಪದ ಮಹಿಳಾ ಸಮಾಜದ ಆವರಣದಲ್ಲಿರುವ ಪಾಳುಬಿದ್ದ ಶೆಡ್ ನಲ್ಲಿ ಜಗದೀಶ್ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಆರ್ಥಿಕ ಮುಗ್ಗಟ್ಟಿನ ಕುರಿತು ಡೆತ್ ನೋಟ್ ನಲ್ಲಿ ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.












