ಮಡಿಕೇರಿ ಜೂ.2 NEWS DESK : ಜಿಲ್ಲಾ ಪೊಲೀಸ್ ಘಟಕದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಗಳಾದ ಯು.ವಿ.ವೀಣಾ ಮತ್ತು ಪಿ.ಪಿ.ವೇದಾವತಿ ಅವರನ್ನು ಇಲಾಖಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.












