Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ : ಸಿಎಂ ಗೆ ಮನವಿ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ : ಸಿಎಂ ಗೆ ಮನವಿ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿ*

ಜೂನ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.3 NEWS DESK : ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅವರು ಅತಿಯಾದ ಮಳೆ ಮತ್ತು ವನ್ಯಜೀವಿಗಳ ದಾಳಿಯಿಂದ ಕೊಡಗಿನ ಜನರಿಗೆ ಆಗುತ್ತಿರುವ ಕಷ್ಟನಷ್ಟದ ಕುರಿತು ವಿವರಿಸಿದರು. ರಾಜಕೀಯ, ನೈಸರ್ಗಿಕ ಮತ್ತು ಆಡಳಿತಾತ್ಮಕ ಎಂಬ ಮೂರು ರೀತಿಯ ಸಮಸ್ಯೆಗಳು ಕೊಡಗು ಜಿಲ್ಲೆಯನ್ನು ಅತಿಯಾಗಿ ಕಾಡುತ್ತಿವೆ. ಹಿಂದೆ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದ ಜಿಲ್ಲೆ ಇಂದು ಕೇವಲ ಎರಡು ಕ್ಷೇತ್ರಗಳಿಗೆ ಸೀಮಿತಗೊಂಡು ಒಂದು ಕ್ಷೇತ್ರದಿಂದ ವಂಚಿತಗೊಂಡಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಮತ್ತೆ ಮೂರು ವಿಧಾನಸಭಾ ಕ್ಷೇತ್ರಗಳನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು. ಗುಡ್ಡಗಾಡು, ನದಿತೊರೆಗಳ ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಅತಿವೃಷ್ಟಿಯಿಂದ ಭೂಕುಸಿತ ಮತ್ತು ಪ್ರವಾಹ ಸಂಭವಿಸಿ ಸಾಕಷ್ಟು ಹಾನಿಯಾಗುತ್ತಿದೆ. ರಸ್ತೆಗಳೆಲ್ಲವೂ ಹದಗೆಟ್ಟು ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತಿದೆ. ಇದರೊಂದಿಗೆ ವನ್ಯಜೀವಿಗಳ ದಾಳಿ ನಿರಂತರವಾಗಿದೆ. ಹುಲಿ, ಆನೆ, ಮಂಗಗಳ ಹಾವಳಿ ಮಿತಿ ಮೀರಿದೆ, ಕ್ರೂರ ಮೃಗಗಳಿಂದ ಜಾನುವಾರುಗಳು ಬಲಿಯಾಗುತ್ತಿವೆ. ಕಾಡಾನೆ ಮತ್ತು ಮಂಗಗಳಿಂದ ರೈತರು ಬೆಳೆದ ಫಸಲು ನಷ್ಟವಾಗುತ್ತಿದೆ, ಅಲ್ಲದೆ ಆನೆಯಿಂದ ಜೀವಕ್ಕೂ ಹಾನಿಯಾಗುತ್ತಿದೆ. ಹಾವಾಗುಣದ ವೈಪರೀತ್ಯ ಹಾಗೂ ವನ್ಯಜೀವಿಗಳ ದಾಳಿಯಿಂದ ಇಳುವರಿ ಕಡಿಮೆಯಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು ಎಂದು ಕೋರಿದರು. ಕೊಡಗು ವಿಶ್ವ ವಿದ್ಯಾನಿಲಯವನ್ನು ಜಿಲ್ಲೆಯಲ್ಲೇ ಉಳಿಸಬೇಕು, ಯುವ ಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು, ಮಾಜಿ ಸೈನಿಕರು, ಮಹಿಳೆಯರು ಹಾಗೂ ಆದಿವಾಸಿಗಳ ಕಲ್ಯಾಣಕ್ಕಾಗಿ ಕ್ರಮ ಕೈಗೊಳ್ಳಬೇಕು, ಕೊಡಗಿನ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಯೋಜನೆ ರೂಪಿಸಬೇಕು, ಹವಾಗುಣ ವೈಪರೀತ್ಯದಿಂದ ಮತ್ತು ಪ್ರಾಕೃತಿಕ ವಿಕೋಪಗಳಿಂದ ರೈತಾಪಿ ವರ್ಗ ಅನುಭವಿಸುತ್ತಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು. ವನ್ಯಜೀವಿಗಳ ದಾಳಿಯನ್ನು ತಡೆಗಟ್ಟಿ ಜನತೆಗೆ ರಕ್ಷಣೆ ನೀಡಬೇಕು, ಕಲುಷಿತಗೊಂಡಿರುವ ಕಾವೇರಿ ನದಿಯ ಹೂಳು ತೆಗೆಯಬೇಕು, ನದಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಬೋಜಣ್ಣ ಸೋಮಯ್ಯ ಮನವಿ ಮಾಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಹಳೇ ಮೈಸೂರು ಭಾಗದ ಹೆಚ್.ಡಿ.ಕೋಟೆ, ಮೈಸೂರು ಹಾಗೂ ಚಾಮರಾಜನಗರ ಪ್ರದೇಶಗಳಿಗೆ ಸುಮಾರು 3,600 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದೇ ಮಾದರಿಯಲ್ಲಿ ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯನ್ನು ಕೂಡ ವಿಶೇಷವಾಗಿ ಪರಿಗಣಿಸಿ ದೊಡ್ಡ ಮೊತ್ತದ ವಿಶೇಷ ಪ್ಯಾಕೇಜ್ ನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.