
ವಿರಾಜಪೇಟೆ ಜೂ.4 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ತಿಳಿಸಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ.ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್.ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್.ಸವಿತಾ ರೈ ತಮ್ಮ ತಂದೆ ದಿವಂಗತ ಬಿ.ಎಸ್.ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿ, ಸಿದ್ದಾಪುರದ ಸಮಾಜ ಸೇವಕರಾದ ಕೆ.ಯು.ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಕೋಲತಂಡ ರಘು ಮಾಚಯ್ಯ ಅವರು ತಮ್ಮ ತಂದೆ ದಿವಂಗತ ಕೋಲತಂಡ ಉತ್ತಪ್ಪ ಹಾಗೂ ತಾಯಿ ಕಾಮವ್ವ ಅವರ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಅರಣ್ಯ ಮತ್ತು ವನ್ಯಜೀವಿ ವರದಿ, ವಿರಾಜಪೇಟೆಯ ಪ್ರಗತಿ ಶಾಲೆಯ ವ್ಯವಸ್ಥಾಪಕರಾದ ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಶೈಕ್ಷಣಿಕ ವರದಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಒಬ್ಬರು ಒಂದು ವಿಭಾಗಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ಪ್ರಕಟವಾದ ವರದಿಯ ಎರಡು ಪ್ರತಿಯೊಂದಿಗೆ ಜೂನ್ 10 ರ ಒಳಗಾಗಿ ಪ್ರಧಾನ ಕಾರ್ಯದರ್ಶಿ ಅವರಿಗೆ ತಲುಪಿಸಲು ಕೋರಲಾಗಿದೆ.









