ಮಡಿಕೇರಿ ಜೂ.4 NEWS DESK : ಬಕ್ರೀದ್ ಹಬ್ಬದ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಸ್‍ಪಿ ಕರೆ ನೀಡಿದರು. ಸಂಭ್ರಮದ ಹಬ್ಬ ಆಚರಣೆಯ ಸಂದರ್ಭ ಯಾವುದೇ ಅಶಾಂತಿ ಸೃಷ್ಟಿಯಾಗದಂತೆ ನೋಡಿಕೊಳ್ಳಲು ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಮುಸ್ಲಿಂ ಮುಖಂಡರುಗಳು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಡಿವೈಎಸ್‍ಪಿ ಸೂರಜ್ ಹಾಗೂ ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ ಹಾಜರಿದ್ದರು.












