
ಮಡಿಕೇರಿ ಜೂ.4 NEWS DESK : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೊಡಗು-ಮೈಸೂರು ಕ್ಷೇತ್ರದ ಸಂಸದರಾಗಿ ಅಧಿಕಾರ ಸ್ವೀಕರಿಸಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ವಿವಿಧ ಕಾರ್ಯಕ್ರಮ ನಡೆಯಿತು. ನಗರದ ಶ್ರೀ ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿದರು. ನಂತರ ವೃದ್ಧರಿಗೆ ಸಿಹಿ ಹಂಚಿ ಊಟದ ವ್ಯವಸ್ಥೆಯನ್ನು ಏರ್ಪಡಿಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಸಂಸದ ಯದುವೀರ್ ಒಡೆಯರ್ ಯಾವುದೇ ಪ್ರಚಾರ ಬಯಸದೆ ಕೊಡಗಿನಾದ್ಯಂತ ಸಂಚರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಮುಂದೆಯೂ ಸಾಕಷ್ಟು ವರ್ಷಗಳ ಕಾಲ ಸಂಸದರಾಗಿ, ಕೇಂದ್ರದ ಮಂತ್ರಿಗಳಾಗಿ ಸೇವೆ ಸಲ್ಲಿಸಲು ದೇವರು ಅನುಗ್ರಹ ನೀಡಲಿ ಎಂದು ಆಶಿಸಿದರು. ಜಿಲ್ಲೆಯ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ರೂ.1.33 ಕೋಟಿ ಅನುದಾನ, ಸ್ವಚ್ಛತಾ ಆಂದೋಲನಕ್ಕಾಗಿ ಮಡಿಕೇರಿ, ಕುಶಾಲನಗರ, ವಿರಾಜಪೇಟೆಗೆ ಒಟ್ಟು 12 ಕೋಟಿ, ಅಮೃತ 2 ಯೋಜನೆಯಡಿ 42 ಕೋಟಿ ಅನುದಾನ ಒದಗಿಸಿದ್ದಾರೆ. ಎನ್‌ಡಿಆರ್‌ಎಫ್‌ನಡಿ ಅನೇಕ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ರವಿ ಕಾಳಪ್ಪ ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಮಾಜಿ ನಗರಸಭೆ ಅಧ್ಯಕ್ಷ ಪಿ.ಡಿ ಪೊನ್ನಪ್ಪ, ಪ್ರಮುಖರಾದ ಬೊಳ್ಳಜಿರ ಬಿ.ಅಯ್ಯಪ್ಪ, ಕವನ್ ಕಾವೇರಪ್ಪ, ಶಿವಕುಮಾರಿ, ಪಾಂಡಿರ ಪೂಣಚ್ಚ, ಗಜೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು, ಹಾಗೂ ಶಕ್ತಿ ಆಶ್ರಮದ ಮೇಲ್ವಿಚಾರಕಿ ರೀನಾ, ಸಿಬ್ಬಂದಿ ವಿಜಯಲಕ್ಷ್ಮಿ ಹಾಜರಿದ್ದರು.









