ಮಡಿಕೇರಿ ಜೂ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನಗರಸಭೆ ಮಡಿಕೇರಿ, ವಕೀಲರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಿ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ. ಜೂ.5 ರಂದು ಬೆಳಗ್ಗೆ 10 ಗಂಟೆಗೆ ಗಾಂಧಿ ಭವನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ನಂತರ ಬೆಳಗ್ಗೆ 10.30 ಗಂಟೆಗೆ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ನಗರಸಭೆ ಆಯುಕ್ತರಾದ ಎಚ್.ಆರ್.ರಮೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾಧ್ಯಕ್ಷರಾದ ಟಿ.ಜಿ.ಪ್ರೇಮ್ ಕುಮಾರ್, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಎಂ.ಜಿ.ಸವಿತಾ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಇತರರು ಪಾಲ್ಗೊಳ್ಳಲಿದ್ದಾರೆ. ಮೇ, 31 ರಂದು ಆಯೋಜಿಸಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಪರಿಸರ ಅಧಿಕಾರಿ ರಘುರಾಮ್ ಅವರು ತಿಳಿಸಿದ್ದಾರೆ.











