ಬೆಂಗಳೂರು ಜೂ.4 NEWS DESK : ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (RCB) ತಂಡವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು. ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ವಿಧಾಸೌಧದ ಮುಂದೆ ಭವ್ಯವಾದ ಅಭಿನಂದನಾ ಸಮಾರಂಭ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು ಮತ್ತು ಶಾಸಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಜತ್ ಪಟಿದಾರ್ ನೇತೃತ್ವದ ತಂಡವನ್ನು ಸನ್ಮಾನಿಸಲಿದ್ದಾರೆ. ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ RCB ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದಲೂ ಅದ್ದೂರಿ ಸ್ವಾಗತ ದೊರೆತಿದೆ.












