ಮಡಿಕೇರಿ ಜೂ.4 NEWS DESK : ಕೊಡಗು ಪ್ರೆಸ್ ಕ್ಲಬ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜೂ.8 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೊಡಗು ಪ್ರೆಸ್ ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ನಂತರ 11.30 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂದಿನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ(ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ, ಮಡಿಕೇರಿ ತಾಲೂಕಿನ ಎಸ್.ಎನ್.ಡಿ.ಪಿ ಅಧ್ಯಕ್ಷ ಟಿ.ಆರ್.ವಾಸುದೇವ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್‍ನ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಹೆಚ್.ಜೆ.ರಾಕೇಶ್, ಕೆ.ಎಂ.ಇಸ್ಮಾಯಿಲ್ ಕಂಡಕರೆ, ಆನಂದ್ ಕೊಡಗು ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಮೂರು ಪ್ರಶಸ್ತಿಯು ತಲಾ 5 ಸಾವಿರ ರೂಪಾಯಿ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಪ್ರಶಸ್ತಿಗಳಿಗೆ ಭಾಜನರಾದ ಕಾಯಪಂಡ ಶಶಿ ಸೋಮಯ್ಯ, ಪಿ.ವಿ.ಅಕ್ಷಯ್, ಯು.ಎಂ.ಜಯಂತಿ, ಇ.ಆರ್.ವಿಶ್ವಕುಮಾರ್ ಹಾಗೂ ಕಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುವ ಹರ್ಷ ಮೇಲಾಂಟ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೆ.ಎಂ.ಇಸ್ಮಾಯಿಲ್ ಕಂಡಕರೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಮೈಸೂರು ದಿಗಂತ ದತ್ತಿನಿಧಿ ಪ್ರಶಸ್ತಿ ಪಡೆದ ಬಾಚರಣಿಯಂಡ ಅನುಕಾರ್ಯಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











