Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ*

ಜೂನ್ 4, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಜೂ.4 NEWS DESK : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಶ್ರೇಷ್ಠ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಮೇಲ್ಪಂಕ್ತಿಯಿಂದ ಕೂಡಿತ್ತು, ಆಡಳಿತದಲ್ಲಿ ಜನರು ಪಾಲ್ಗೊಳ್ಳುವಂತೆ ಮಾಡಿದ್ದರು ಎಂದು ನುಡಿದರು. ಕೊಡಗಿನ ಸಾಂಸ್ಕøತಿಕ ಹಾಗೂ ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ಬುಡಕಟ್ಟು ಜನಾಂಗಗಳ ಬಗ್ಗೆ ವಿಸ್ತøತವಾದ ಅಧ್ಯಯನ ನಡೆಯುವಂತಾಗಬೇಕು ಎಂದು ಸುಬ್ರಾಯ ಸಂಪಾಜೆ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆ ಸೇನಾ ಕ್ಷೇತ್ರ ಹಾಗೂ ಕ್ರೀಡಾ ಪರಂಪರೆಗೆ ಹೆಸರಾಗಿದೆ. ಸೈನಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಯವರು ತಮ್ಮದೇ ಆದ ಛಾಪು ಮೂಡಿಸಿದ್ದು, ಆ ನಿಟ್ಟಿನಲ್ಲಿ ಈ ಬಗ್ಗೆಯೂ ಸಹ ಅಧ್ಯಯನ ಮಾಡುವಂತಾಗಬೇಕು ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನಪದ ಮತ್ತು ಸಾಮಾಜಿಕ ಅಧ್ಯಯನ ಸಾಕಷ್ಟು ನಡೆದಿವೆ. ಅದೇ ರೀತಿ ಕೊಡಗು ಜಿಲ್ಲೆಯಲ್ಲಿಯೂ ಜಾನಪದ ಮತ್ತು ಸಾಮಾಜಿಕ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಸುಬ್ರಾಯ ಸಂಪಾಜೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ‘ಕೊಡಗು ಜಿಲ್ಲೆಯಲ್ಲಿ ಗಮಕ ಕ್ಷೇತ್ರವನ್ನು ಉಳಿಸಿ ಬೆಳೆಸುವಂತಾಗಬೇಕು. ಹಿಂದೆ ಗೋಪಾಲಕೃಷ್ಣ ಅವರು ಗಮಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಮುಂದಿನ ದಿನಗಳಲ್ಲಿ ಗಮಕ ಸಂಗೀತ ಕ್ಷೇತ್ರವನ್ನು ಉಳಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಸುಬ್ರಾಯ ಸಂಪಾಜೆ ಅವರು ಸಲಹೆ ನೀಡಿದರು.’ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಮಿತಾ ಅಮೃತರಾಜ್ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಲೋಕ ದರ್ಶನ ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುವಂತಾಗಬೇಕು ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಅವರು ಮಾತನಾಡಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ತಮ್ಮ ಅಧಿಕಾರ ಅವಧಿಯಲ್ಲಿ ಕೃಷ್ಣರಾಜ ಸಾಗರ, ವಾಣಿ ವಿಲಾಸ ಸಾಗರ ಅಣೆಕಟ್ಟು ನಿರ್ಮಿಸಿ, ಕೃಷಿಕರ ಕಣ್ಮನಿಯಾಗಿದ್ದಾರೆ ಎಂದು ತಿಳಿಸಿದರು. ಮೈಸೂರು ವೈದ್ಯಕೀಯ ಕಾಲೇಜು, ಮೈಸೂರು ವಿಶ್ವವಿದ್ಯಾನಿಲಯ, ಕನ್ನಡ ಸಾಹಿತ್ಯ ಪರಿಷತ್ತು, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಸ್ಯಾಂಡಲ್ ಸೋಪು, ಭಾರತೀಯ ವಿಜ್ಞಾನ ಸಂಸ್ಥೆ, ಮೈಸೂರು ಬ್ಯಾಂಕ್, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ, ಹೀಗೆ ಹಲವಾರು ಅಭಿವೃದ್ಧಿ ಮತ್ತು ಪ್ರಗತಿಪರ ಕಾರ್ಯಕ್ರಮ ಜಾರಿಗೊಳಿಸುವ ಮೂಲಕ ಮೈಸೂರು ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು. ಮೈಸೂರು ಸಂಸ್ಥಾನವನ್ನು ಮಾದರಿ ರಾಜ್ಯವನ್ನಾಗಿ ಮಾಡಿದ್ದರು. ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಜಾರಿಗೊಳಿಸಿದರು. ಮೈಸೂರನ್ನು ಆಧುನಿಕ ರಾಜ್ಯವನ್ನಾಗಿ ಮಾಡಿದ್ದರು ಎಂದು ಮುನೀರ್ ಅಹ್ಮದ್ ವಿವರಿಸಿದರು. ಸಾಹಿತಿ ನಾಗೇಶ್ ಕಾಲೂರು ಅವರು ಮಾತನಾಡಿ ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅವರವರ ಭಾಷೆಯನ್ನು ಪ್ರೀತಿಸಬೇಕು. ಗೌರವಿಸಬೇಕು. ಹಾಗೂ ಇತರ ಭಾಷೆಗಳನ್ನು ಸಹ ಗೌರವಿಸಬೇಕು. ಯಾರೂ ಸಹ ಸಣ್ಣತನ ಪ್ರದರ್ಶಿಸಬಾರದು ಎಂದು ಸಲಹೆ ನೀಡಿದರು. ಅವರವರ ಮಾತೃ ಭಾಷೆ ಅವರಿಗೆ ಹೃದಯ ಶ್ರೀಮಂತಿಕೆ ಭಾಷೆಯಾಗಿದೆ. ಆ ನಿಟ್ಟಿನಲ್ಲಿ ಮತ್ತೊಂದು ಭಾಷೆಯನ್ನು ಗೌರವಿಸಬೇಕು ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 40 ದತ್ತಿ ಪ್ರಶಸ್ತಿ ಸ್ಥಾಪಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಗೌರವಿಸುತ್ತಾ ಬರಲಾಗಿದೆ. ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಬೂಕರ್ ಪ್ರಶಸ್ತಿ ವಿಜೇತರಾದ ಮಡಿಕೇರಿಯ ದೀಪಾಭಾಸ್ತಿ ಅವರಿಗೆ ಜೂ.9 ಅಥವಾ 10 ರಂದು ಸನ್ಮಾನ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು. ಸ್ಮಿತಾ ಅಮೃತರಾಜ್ ಅವರ ಸಾಹಿತ್ಯ ವಿಚಾರಧಾರೆ ಹಾಗೂ ಸುಬ್ರಾಯ ಸಂಪಾಜೆ ಅವರ ಸಾಂಸ್ಕøತಿಕ ಮತ್ತು ಆಕಾಶವಾಣಿಯಲ್ಲಿನ ಸೇವೆ ಬಗ್ಗೆ ಗುಣಗಾನ ಮಾಡಿದರು. ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದಿಂದ ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಪುದಿಯ ನೆರವನ ರೇವತಿ ರಮೇಶ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರಾದ ಬಾರಿಯಂಡ ಜೋಯಪ್ಪ, ಕಾವೇರಿ ಪ್ರಕಾಶ್, ಬೈತಡ್ಕ ಜಾನಕಿ, ಕಟ್ರತನ ಲಲಿತ ಅಯ್ಯಣ್ಣ, ಲೋಕನಾಥ ಅಮೆಚೂರು, ಪ್ರೇಮ ರಾಘವಯ್ಯ, ಸುನಿತಾ ಲೋಕೇಶ್, ಸುಂದರಿ ಮಾಚಯ್ಯ, ಸಹನಾ ಕಾಂತಬೈಲು, ಗೀತಾ, ನೀತು, ಕನ್ನಡ ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಇತರರು ಇದ್ದರು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿದರು. ವಾಸು ರೈ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.