ಸುಂಟಿಕೊಪ್ಪ ಜೂ.6 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಮತ್ತು ಕಾನ್‍ಬೈಲ್ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕಾನ್ ಬೈಲ್ ಶಾಲಾವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಗಿಡ ನೆಟ್ಟು ಮಾತನಾಡಿ, ಮುಂದಿನ ಪೀಳಿಗೆಗೆ ನೆಲ ಜಲ ಪರಿಶುದ್ಧವಾಗಿರಬೇಕೆಂದರೇ ಪ್ರತಿಯೊಬ್ಬರೂ ಪರಿಸರ ಸಂಕ್ಷರಣೆಯಲ್ಲಿ ತೊಡಗಿಸಿಕೊಳ್ಳಬೇಕು, ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವುದರಿಂದ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ಆರಂಭಗೊಳ್ಳಬೇಕಿದೆ ನಾವು ಆರೋಗ್ಯವಂತರಾಗಿ ಬದುಕಲು ಸಾಧ್ಯವಾಗಲಿದೆ ಎಂದು ಮಂದೋಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ರಮೇಶ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸ್ಮ, ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್, ಶಾಲಾ ಮುಖ್ಯೋಪಾದ್ಯಾಯಿನಿ ಶಾಂತಿರೈ, ಸಹ ಶಿಕ್ಷಕರುಗಳಾದ ಯಶೋಧ, ಕವಿತ, ಶ್ರೀ.ಕ್ಷೇ.ಧ.ಗ್ರಾ.ಯೋ.ಸೇವಾ ಪ್ರತಿನಿಧಿ ಯಶೋಧ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.











