ಮಡಿಕೇರಿ ಜೂ.6 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗಿಡ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಹಸಿರು ಬೆಳೆಸಿ-ಹಸಿರು ಉಳಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಸಬಲೀಕರಣದ ಸಿಬ್ಬಂದಿಗಳು ಹಾಜರಿದ್ದರು.












