Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ ದೇವರಾಜ ಅರಸು ಪುಣ್ಯ ಸ್ಮರಣೆ : ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಡಿ ದೇವರಾಜ ಅರಸು ಪುಣ್ಯ ಸ್ಮರಣೆ : ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜೂ.6 NEWS DESK :  ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ನಡೆದ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಡಿ ದೇವರಾಜ ಅರಸು ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿದ್ದೇನೆ. ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು. ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.