ನಾಪೋಕ್ಲು ಜೂ.6 NEWS DESK : ಪ್ರಕೃತಿಯ ನಾಶ ಮನುಕುಲದ ವಿನಾಶ ಎಂದು ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಕೆ.ಆರ್.ರಮೇಶ್ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಈ ಸುಂದರ ಜೀವವೈವಿಧ್ಯವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರಕೃತಿಯ ಸಮತೋಲನದಿಂದ ಪಶು, ಪ್ರಾಣಿ, ಪಕ್ಷಿಗಳು ಮತ್ತು ಮಾನವನು ಆರೋಗ್ಯವಾದ ಜೀವನವನ್ನು ಸಾಧಿಸಲು ಸಾಧ್ಯ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕೆ.ಆರ್.ರಮೇಶ್ ಪರಿಸರದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಈ ಸಂದರ್ಭ ಶಿಕ್ಷಕರಾದ ಎಸ್.ಪಿ.ಪರಮೇಶ್, ಎಂ.ಎ.ಅಯ್ಯಪ್ಪ, ಹರೀಶ್, ಹೇಮಾವತಿ, ಶೃಂಗ ಮತ್ತು ರೋಹಿತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.











