ಮಡಿಕೇರಿ ಜೂ.6 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.11 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಗಿಎ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.











